Select Your Language

Notifications

webdunia
webdunia
webdunia
webdunia

ಮಕ್ಕಳಿಗೆ ಕೊರೋನಾ ಲಸಿಕೆ ಅಭಿಯಾನ

ಮಕ್ಕಳಿಗೆ ಕೊರೋನಾ ಲಸಿಕೆ ಅಭಿಯಾನ
ಬೆಂಗಳೂರು , ಗುರುವಾರ, 28 ಏಪ್ರಿಲ್ 2022 (11:42 IST)
ಲಸಿಕಾಕರಣ ಉತ್ತಮವಾಗಿದ್ದ ಕಾರಣ 3ನೇ ಅಲೆ ನಿಯಂತ್ರಣ ಸಾಧ್ಯವಾಯಿತು. ಹೀಗಾಗಿ ಈಗಲೂ ಲಸಿಕೆಗೆ ಹೆಚ್ಚು ಒತ್ತು ನೀಡಲಾಗುವುದು.
 
ಈಗಾಗಲೇ ಶೇ.98 ರಷ್ಟುಮಂದಿಗೆ ಲಸಿಕೆ ಹಾಕಲಾಗಿದೆ. 6ರಿಂದ 12 ವರ್ಷದೊಳಗಿನ ಮಕ್ಕಳಿಗೂ ಲಸಿಕೆ ನೀಡಲು ಕೇಂದ್ರ ಅನುಮತಿಸಿದೆ. ಹೀಗಾಗಿ ಎಲ್ಲಾ ವಯೋಮಾನದವರಿಗೂ ಲಸಿಕೆ ನೀಡಲು ಆದ್ಯತೆ ನೀಡಲಾಗುವುದು ಎಂದು ಸಿಎಂ ಹೇಳಿದರು.

ರಾಜ್ಯದಲ್ಲಿ ಏ.9ರ ಬಳಿಕವಷ್ಟೇ ಪಾಸಿಟಿವಿಟಿ ದರ ಹೆಚ್ಚಾಗಿದೆ. ಹೀಗಾಗಿ ಕೊರೋನಾ ಪ್ರಮಾಣ ಅರಿಯಲು ನಿತ್ಯ 10ರ ಬದಲಿಗೆ 30 ಸಾವಿರ ಪರೀಕ್ಷೆ ನಡೆಸಲಾಗುವುದು.

ಈ ಪೈಕಿ ಬೆಂಗಳೂರಿನಲ್ಲೇ 10 ಸಾವಿರ ಪರೀಕ್ಷೆ ನಡೆಸಲಾಗುವುದು. ಜತೆಗೆ ಎಲ್ಲಾ ಆಸ್ಪತ್ರೆಗಳಲ್ಲಿರುವ ರೋಗಿಗಳಿಗೆ ಪರೀಕ್ಷೆ ನಡೆಸಲಾಗುವುದು. ಅಲ್ಲಿ ಪಾಸಿಟಿವ್ ಬಂದ ರೋಗಿಯ ಮಾದರಿಯನ್ನು ಜಿನೋಮ್ ಸೀಕ್ವೆನ್ಸಿಂಗ್ಗೆ ಕಳುಹಿಸಲಾಗುವುದು. ರೂಪಾಂತರಿಗಳ ಬಗ್ಗೆ ಹೆಚ್ಚು ಗಮನ ನೀಡಲಾಗುವುದು ಎಂದರು.

ಜತೆಗೆ, ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದೆ. ಶೇ.2 ರಷ್ಟುಮಂದಿಗೆ ರಾರಯಂಡಮ್ ಪರೀಕ್ಷೆ ನಡೆಸಲಾಗುತ್ತಿದೆ. ಅವರ ಟೆಲಿ ಟ್ರಾಕಿಂಗ್ ಕೂಡ ಮಾಡಲಾಗುತ್ತಿದೆ. ಆಸ್ಪ್ರೇಲಿಯಾ ಇಂಡೋನೇಷ್ಯಾ, ನ್ಯೂಜಿಲೆಂಡ್, ದಕ್ಷಿಣ ಕೊರಿಯಾ ಕಡೆಯಿಂದ ಬರುವವರ ಮೇಲೆ ಎಚ್ಚರಿಕೆ ವಹಿಸಲಾಗಿದೆ.

ರಾಜ್ಯದ ಗಡಿಗಳಲ್ಲಿ ಪರೀಕ್ಷೆ, ಅಗತ್ಯ ಬೆಡ್ ವ್ಯವಸ್ಥೆ, ಆಕ್ಸಿಜನ್ ವ್ಯವಸ್ಥೆ ಸೇರಿದಂತೆ ಕೊರೋನಾ ಎದುರಿಸಲು ಎಲ್ಲಾ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುವುದು.


Share this Story:

Follow Webdunia kannada

ಮುಂದಿನ ಸುದ್ದಿ

ಅನಗತ್ಯ ಕಠಿಣ ನಿರ್ಬಂಧ ಇಲ್ಲ : ಸಿಎಂ