Select Your Language

Notifications

webdunia
webdunia
webdunia
webdunia

ಕೊರೊನಾ ವೈರಸ್ : ಮಾರ್ಚ್ 31 ರವರೆಗೆ 144 ಸೆಕ್ಷನ್ ಜಾರಿ

ಕೊರೊನಾ ವೈರಸ್ : ಮಾರ್ಚ್ 31 ರವರೆಗೆ 144 ಸೆಕ್ಷನ್ ಜಾರಿ
ಗದಗ , ಶುಕ್ರವಾರ, 20 ಮಾರ್ಚ್ 2020 (19:48 IST)
ಕೊರೊನಾ ವೈರಸ್ ಭೀತಿಯಿಂದಾಗಿ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ಗದಗ ಜಿಲ್ಲೆಯಲ್ಲಿ ಕೊರೋನಾ ಪಿಡುಗು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನೀಡಿರುವ ಆದೇಶದನ್ವಯ ಗದಗ ಜಿಲ್ಲೆಯಾದ್ಯಂತ ದಂಡ ಸಂಹಿತೆ ಪ್ರಕ್ರಿಯೆ 144 ರ ರೀತ್ಯ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ. ಕೊರೋನಾ ವೈರಸ್ ಹರಡದಂತೆ ಸಾರ್ವಜನಿಕ ಮುಂಜಾಗ್ರತಾ ಕ್ರಮವಾಗಿ ಕೈಗೊಳ್ಳುವಂತೆ ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ  ಆದೇಶದಲ್ಲಿ ತಿಳಿಸಿದ್ದಾರೆ.

ಗದಗ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲಾ, ಕಾಲೇಜು ಹಾಗೂ ಕೋಚಿಂಗ್ ಸೆಂಟರ್ ಎಲ್ಲಾ ತರಹದ ಶಿಕ್ಷಣ ಸಂಸ್ಥೆಗಳಿಗೆ (ಪರೀಕ್ಷೆ ಹೊರತುಪಡಿಸಿ) ರಜೆಯನ್ನು ಘೋಷಿಸಿದೆ.

ಜಿಲ್ಲೆಯಾದ್ಯಂತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತಹ ಸ್ಥಳಗಳಾದ ಸಂತೆ, ಜಾತ್ರೆಗಳನ್ನು ಮುಂದೂಡಲಾಗಿದೆ. ಗದಗ ಜಿಲ್ಲೆಯಾದ್ಯಂತ  ಚಿತ್ರಮಂದಿರ, ನಾಟಕ ಪ್ರದರ್ಶನ, ಉದ್ಯಾನ, ಹೊಟೆಲ್, ದಾಬಾ ಹಾಗೂ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಪ್ರವೇಶ ನಿಷೇಧಿಸಿದೆ.

ಈ ಪ್ರತಿಬಂಧಕಾಜ್ಞೆಯು ಮಾರ್ಚ 31ರ ವರೆಗೆ ಜಾರಿಯಲ್ಲಿದ್ದು, ಸಾರ್ವಜನಿಕರು ಕೊರೊನಾ ಸೊಂಕು ತಡೆಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಸೂಚಿಸಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಯಾತ್ರಿ ನಿವಾಸ್