ಕೊರೊನಾ ವಾರಿಯರ್ ಗಳು ಪ್ರತಿಭಟನೆ ಹಾದಿ ತುಳಿದಿದ್ದಾರೆ.
ಗದಗ ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್ ಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಆಯುಷ್ ಇಲಾಖೆ ಗುತ್ತಿಗೆ ಕೆಲಸ ಮಾಡುವ ಸುಮಾರು 60 ವೈದ್ಯರು ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.
ಮಹಾತ್ಮ ಗಾಂಧಿ ಸರ್ಕಲ್ ಬಳಿಯ ಹಳೆ ಸರಕಾರಿ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿ, ಸೇವೆ ಖಾಯಂ ಮಾಡುವುದು, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಬೇಡಿಕೆ ಈಡೇರುವವರೆಗೆ ಕೆಲಸಕ್ಕೆ ಗೈರು ಹಾಜರಾಗುವುದಾಗಿ ತಿಳಿಸಿದ್ದಾರೆ. ಸೇವೆ ಬಂದ್ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇವೆ. ಇಲ್ಲಿಯವರೆಗೆ ಸೋಂಕಿತರ ಸ್ವ್ಯಾಬ್ ತಪಾಸಣೆ, ಕಂಟೈನಮೆಂಟ್ ಪ್ರದೇಶ ಜನರ ಸೇವೆ ಸೇರಿದಂತೆ ಕೊರೋನಾ ಸೇವೆಯಲ್ಲಿ ತೊಡಗಿದರೂ ಕಡೆಗಣಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.