Publish Date: Sat, 04 Jul 2020 (17:19 IST)
Updated Date: Sat, 04 Jul 2020 (17:20 IST)
ಮಾರಣಾಂತಿಕ ಹಾಗೂ ಜಾಗತಿಕವಾಗಿ ಭೀತಿ ಹರಡುತ್ತಿರುವ ಕೊರೊನಾ ವೈರಸ್ ಜೈಲಿನಲ್ಲಿಯೂ ಕಾಣಿಸಿಕೊಂಡಿದೆ.
ಸೆಂಟ್ರಲ್ ಜೈಲಿನಲ್ಲಿ ಕೋವಿಡ್ -19 ಕಾಣಿಸಿಕೊಂಡಿದೆ. ಮೈಸೂರಿನ ಕೇಂದ್ರ ಕಾರಾಗೃಹದಲ್ಲಿರುವ ವಿಚಾರಣಾಧೀನ ಆರೋಪಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿದೆ.
ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.
ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಆತನ ಜೊತೆಗಿದ್ದ ಕೈದಿಗಳನ್ನು ಜೈಲಿನಲ್ಲಿಯೇ ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲಾಗಿದೆ.