Webdunia - Bharat's app for daily news and videos

Install App

ಕೊವ್ಯಾಕ್ಸಿನ್, ಕೊವಿಶೀಲ್ಡ್ ಲಸಿಕೆ ಪಡೆದವರಿಗೂ ಕೊರೊನಾ!

Webdunia
ಗುರುವಾರ, 2 ಡಿಸೆಂಬರ್ 2021 (20:34 IST)
ನ.1ರಿಂದ ನ.20ರವರೆಗೆ 1,538 ಜನರಿಗೆ ಕೊವಿಡ್ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಲಸಿಕೆ ಪಡೆದ 1,254 ಜನರಿಗೆ ಸೋಂಕು ದೃಢವಾಗಿರುವುದು ತಿಳಿದುಬಂದಿದೆ. ಲಸಿಕೆ ಪಡೆಯದ 278 ಜನರು ಸೋಂಕಿಗೆ ಒಳಗಾಗಿದ್ದಾರೆ.ಕೊರೊನಾ (Coronavirus) ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಎಲ್ಲ ಕೆಲಸ ಕಾರ್ಯಗಳು ಪ್ರಾರಂಭಗೊಂಡಿವೆ. ಸಹಜ ಸ್ಥಿತಿಗೆ ಬರುತ್ತಿದ್ದಂತೆ ಹೊರ ದೇಶಗಳಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ವೈರಸ್ ಪತ್ತೆಯಾಗಿದೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿವೆ. ತಜ್ಞರು ಸಲಹೆ ನೀಡಿದ ಬೆನ್ನಲ್ಲೆ ಅಧಿಕಾರಿಗಳು ತಮ್ಮ ತಮ್ಮ ಕೆಲಗಳನ್ನು ಪ್ರಾರಂಭಿಸಿದ್ದಾರೆ. ಈ ನಡುವೆ ಬಿಬಿಎಂಪಿ ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿಯೊಂದು ಬಯಲಾಗಿದೆ.
 
ಕೊವಿಡ್ ಲಸಿಕೆ ಪಡೆದ ಮೇಲೂ ಕೊರೊನಾ ಬಗ್ಗೆ ನಿರ್ಲಕ್ಷ್ಯ ವಹಿಸುವಂತಿಲ್ಲ. ಈ ಬಗ್ಗೆ ಬಿಬಿಎಂಪಿ ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ ಬಯಲಾಗಿದೆ. 20 ದಿನದ ಅಂಕಿಅಂಶದಿಂದ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ಪಡೆದವರಿಗೂ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂಬ ಮಾಹಿತಿ ಬಿಬಿಎಂಪಿ ಅಧ್ಯಯನದಲ್ಲಿ ತಿಳಿದುಬಂದಿದೆ.ನ.1ರಿಂದ ನ.20ರವರೆಗೆ 1,538 ಜನರಿಗೆ ಕೊವಿಡ್ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಲಸಿಕೆ ಪಡೆದ 1,254 ಜನರಿಗೆ ಸೋಂಕು ದೃಢವಾಗಿರುವುದು ತಿಳಿದುಬಂದಿದೆ. ಲಸಿಕೆ ಪಡೆಯದ 278 ಜನರು ಸೋಂಕಿಗೆ ಒಳಗಾಗಿದ್ದಾರೆ. ಸೋಂಕಿತರ ಪೈಕಿ ಶೇ.72ರಷ್ಟು ಜನ ಲಸಿಕೆ ಪಡೆದವರಾಗಿದ್ದಾರೆ. ಶೇ.18ರಷ್ಟು ಲಸಿಕೆ ಪಡೆಯದವರಿಗೆ ಸೋಂಕು ದೃಢಪಟ್ಟಿದೆ. 655 ಜನರಿಗೆ ಲಸಿಕೆ ಪಡೆದ 100 ದಿನಗಳ ಬಳಿಕ ಕಾಣಿಸಿಕೊಂಡಿದೆ. ಈ ಎಲ್ಲಾ ಸ್ಪೋಟಕ ಮಾಹಿತಿ ಬಿಬಿಎಂಪಿ ಅಧ್ಯಯನದ ಮೂಲಕ ತಿಳಿದುಬಂದಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments