Publish Date: Wed, 08 Apr 2020 (19:50 IST)
Updated Date: Wed, 08 Apr 2020 (19:51 IST)
ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡಿದ್ದ ಇಬ್ಬರು ತಬ್ಲಿಘಿಗಳಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ಬೈಲನರಸಾಪುರ ಗ್ರಾಮದ 35 ವರ್ಷದ ಮತ್ತೋರ್ವ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಸೋಂಕು ದೃಢ ಪಟ್ಟಿದೆ. ಪ್ರಸಕ್ತ ಈ ವ್ಯಕ್ತಿಯು ಬೆಂಗಳೂರು ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಲ್ಲಿಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಕೊರೋನಾ ವೈರಸ್ ಸೋಂಕು ದೃಢ ಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
Jagadeesh
Publish Date: Wed, 08 Apr 2020 (19:50 IST)
Updated Date: Wed, 08 Apr 2020 (19:51 IST)