Publish Date: Tue, 02 Nov 2021 (20:23 IST)
Updated Date: Tue, 02 Nov 2021 (20:26 IST)
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 10,423 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,42,96,237ಕ್ಕೆ ಏರಿಕೆಯಾಗಿದೆ.
ಸಾವಿನ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದ್ದು, 24 ಗಂಟೆಯಲ್ಲಿ 443 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 458880 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 153776 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 15021 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33683581 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 10,09,045 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 52,39,444 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,06,85,71,879 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.