Select Your Language

Notifications

webdunia
webdunia
webdunia
webdunia

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕೊರೊನಾ ವೈರಸ್

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕೊರೊನಾ ವೈರಸ್
ತುಮಕೂರು , ಶುಕ್ರವಾರ, 26 ಜೂನ್ 2020 (16:30 IST)
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗೆ ಕೊರೊನಾ ವೈರಸ್ ಪಾಸಿಟಿವ್ ವರದಿ ಬಂದಿದೆ.

ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್ 19 ಪಾಸಿಟಿವ್ ಕಂಡು ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 58ಕ್ಕೆ ಏರಿದೆ.
ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ 15 ವರ್ಷದ ಬಾಲಕನಿಗೆ (ಟಿಎಂಕೆ 58) ಸೋಂಕು ಕಂಡು ಬಂದಿದೆ.

ಈತ ಜೂನ್ 24 ರಂದು ಶಿರಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ನೀಡಿದ್ದ, ಅದನ್ನು ತುಮಕೂರಿನ ಜಿಲ್ಲಾ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಸೋಂಕು ದೃಢಪಟ್ಟಿದೆ. ಈತನನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈತನ ತಾಯಿ ಆಂಧ್ರಪ್ರದೇಶದ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡಿದ್ದು, ಅವರಿಗೂ ಕೋವಿಡ್ 19 ಪಾಸಿಟಿವ್ ಬಂದಿದೆ. ಅವರನ್ನು ಆಂಧ್ರಪ್ರದೇಶದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಸೋಂಕಿತ ಬಾಲಕನು ಜೂನ್ 22 ರಂದು ತಂದೆಯೊಂದಿಗೆ ಆಂಧ್ರಪ್ರದೇಶದ ರಾಯದುರ್ಗ ತಾಲೂಕಿನಿಂದ ಬಸ್ ನಲ್ಲಿ ಶಿರಾಗೆ ಬಂದಿದ್ದನು. ಬಾಲಕನ ತಂದೆಯನ್ನು ಕ್ವಾರಂಟೈನ್ ಮಾಡಲಾಗಿದ್ದು, ಪ್ರಥಮ ಸಂಪರ್ಕದಲ್ಲಿದ್ದ 5 ಜನರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಿದ್ದು, ಎರಡನೇ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಲಾಕ್ ಡೌನ್ : ಸಚಿವರು ಹೇಳಿದ್ದೇನು?