Select Your Language

Notifications

webdunia
webdunia
webdunia
webdunia

15-18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ - ಜ. 1ರಿಂದ ಕೋವಿನ್ ಆಪ್‌ನಲ್ಲಿ ನೋಂದಣಿ ಪ್ರಾರಂಭ

15-18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ - ಜ. 1ರಿಂದ ಕೋವಿನ್ ಆಪ್‌ನಲ್ಲಿ ನೋಂದಣಿ ಪ್ರಾರಂಭ
bangalore , ಬುಧವಾರ, 29 ಡಿಸೆಂಬರ್ 2021 (19:00 IST)
15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡುವ ಸಂಬಂಧ ಜನವರಿ 1ರಿಂದ ಕೋವಿನ್ ಆಪ್‌‌ನಲ್ಲಿ ನೋಂದಣಿ ಆರಂಭಗೊಳ್ಳಲಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಮಾಹಿತಿ ನೀಡಿರುವ ಕೋವಿನ್ ಪ್ಲಾಟ್‌ಫಾರ್ಮ್ ಮುಖ್ಯಸ್ಥ ಡಾ.ಆರ್.ಎಸ್.ಶರ್ಮಾ, 15-18 ವರ್ಷ ವಯಸ್ಸಿನ ಮಕ್ಕಳು ಜನವರಿ 1 ರಿಂದ ಕೋವಿನ್ ಆಯಪ್ ನಲ್ಲಿ ನೋಂದಾಯಿಸಲು ಸಾಧ್ಯವಾಗುತ್ತದೆ. ಕೋವಿನ್ ಪೋರ್ಟಲ್‌ನಲ್ಲಿ ನೋಂದಾಯಿಸಲು, ಮಕ್ಕಳು 10 ನೇ ತರಗತಿಯ ಗುರುತಿನ ಚೀಟಿಯನ್ನು ಬಳಸಬಹುದು” ಎಂದಿದ್ದಾರೆ.
ಇನ್ನು ಜನವರಿ 3 ರಿಂದ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ಪ್ರಾರಂಭಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದು, ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರಿಗೆ ‘ಮುನ್ನೆಚ್ಚರಿಕೆ ಡೋಸ್’ ಅನ್ನು ಜನವರಿ 10, 2022 ರಿಂದ ನೀಡಲಾಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಬೇರೆ ಪಾರ್ಟಿಯವರು ನನ್ನ ಮೇಲೆ ಆರೋಪ ಮಾಡುತ್ತಾರೆ