Publish Date: Sat, 13 Jun 2020 (21:33 IST)
Updated Date: Sat, 13 Jun 2020 (21:34 IST)
ಕೊರೊನಾ ವೈರಸ್ ಎಲ್ಲಾ ರೋಗಿಗಳು ಗುಣಮುಖರಾಗಿ ಬಿಡುಗಡೆಗೊಂಡ ಬೆನ್ನಲ್ಲೇ ಗ್ರೀನ್ ಝೋನ್ ಗೆ ಸೇರಬೇಕಿದ್ದ ಜಿಲ್ಲೆಗೆ ಮತ್ತೆ ಕೊರೊನಾ ವಕ್ಕರಿಸಿದೆ.
ಹಸಿರು ವಲಯಕ್ಕೆ ಸೇರಿದ್ದ ಹಾವೇರಿ ಜಿಲ್ಲೆಯಲ್ಲಿ ಹೊಸ ಎರಡು ಕೋವಿಡ್ - 19 ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ 23 ವರ್ಷದ ಪುರುಷ ಹಾಗೂ 34 ವರ್ಷದ ಮಹಿಳೆಗೆ ಕೊರೋನಾ ಸೋಂಕು ಇರುವುದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.
ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಜಿಲ್ಲೆಯಲ್ಲಿ 23 ಜನರಿಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, 21 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.