Publish Date: Wed, 27 May 2020 (22:35 IST)
Updated Date: Wed, 27 May 2020 (22:37 IST)
ಈ ಜಿಲ್ಲೆಯಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿದ್ದು ಹೊಸದಾಗಿ 14 ಕೇಸ್ ಗಳು ಪತ್ತೆಯಾಗಿವೆ.
ಹಾಸನ ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನೇ ದಿನೇ ಉಲ್ಬಣವಾಗುತ್ತಿದ್ದು, ಹೊಸದಾಗಿ 14 ಪ್ರಕರಣ ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 136ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.
ಪತ್ತೆಯಾದ ಸೋಂಕಿತರಲ್ಲಿ 13 ಮಂದಿ ಮಹಾರಾಷ್ಟ್ರದಿಂದ ಆಗಮಿಸಿದ್ದು, ಒಬ್ಬರು ತಮಿಳುನಾಡಿನಿಂದ ಪ್ರಯಾಣ ಮಾಡಿದ್ದ ಹಿನ್ನೆಲೆ ಹೊಂದಿದ್ದಾರೆ.
ಸೋಂಕಿತರೆಲ್ಲರನ್ನೂ ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು, ಅವರನ್ನು ಕ್ವಾರಂಟೈನ್‍ನಿಂದ ಬಿಡುಗಡೆ ಮಾಡುವ ಮುನ್ನ 14 ನೇ ದಿನ ಪರೀಕ್ಷೆಗೆ ಒಳಪಡಿಸಿದ ಸಂದರ್ಭದಲ್ಲಿ ಅವರಿಗೆ ಕೋವಿಡ್-19 ಸೋಂಕು ಇರುವದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.