Publish Date: Fri, 07 May 2021 (12:48 IST)
Updated Date: Fri, 07 May 2021 (12:50 IST)
ಮೈಸೂರು : ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸುರೇಶ್ ಕುಮಾರ್ ಅವರನ್ನು ಕೊವಿಡ್ ಸೋಂಕಿತನೊಬ್ಬ ತರಾಟೆಗೆ ತೆಗೆದುಕೊಂಡಿದ್ದಾರೆ.
ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಸಚಿವರು ಭೇಟಿ ನೀಡಿದ್ದ ವೇಳೆ ಸೋಂಕಿತರು ತರಾಟೆ ತೆಗೆದುಕೊಂಡಿದ್ದಾರೆ. ಕೊರೊನಾ ಸೋಂಕಿತರಿಗೆ ಉಸಿರಾಟದ ಸಮಸ್ಯೆ ಹೆಚ್ಚಾಗಿದೆ. ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ಬೆಡ್ ಗಳು ಸಿಗುತ್ತಿಲ್ಲ. ಆಕ್ಸಿಜನ್ ಸಿಗದೇ ಸೋಂಕಿತರಿಗೆ ಸಮಸ್ಯೆ ಆಗ್ತಿದೆ. ಆದರೆ ನೀವು ಮಾತ್ರ ಹೊರಗಡೆ ಇದ್ದುಕೊಂಡು ಬೆಡ್ ಗಳ ಸಮಸ್ಯೆ ಇಲ್ಲ. ಆಕ್ಸಿಜನ್ ಸಮಸ್ಯೆ ಇಲ್ಲೆಂದು ಹೇಳ್ತಾ ಇದ್ದೀರಾ ಎಂದು ಸಚಿವರ ಮೇಲೆ ಕಿಡಿಕಾರಿದ್ದಾರೆ.
ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಮಾತ್ರ ನಾಳೆ ವೇಳೆಗೆ ಎಲ್ಲಾ ಸರಿಯಾಗುತ್ತೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.