Select Your Language

Notifications

webdunia
webdunia
webdunia
webdunia

ನಿಗಮಗಳಿಗೆ ವಿಶೇಷ ಅನುದಾನ ನೀಡಲು ಸಾಧ್ಯವಿಲ್ಲ : ಸಾರಿಗೆ ಇಲಾಖೆ

ನಿಗಮಗಳಿಗೆ ವಿಶೇಷ ಅನುದಾನ ನೀಡಲು ಸಾಧ್ಯವಿಲ್ಲ : ಸಾರಿಗೆ ಇಲಾಖೆ
ಬೆಂಗಳೂರು , ಶುಕ್ರವಾರ, 16 ಜೂನ್ 2023 (09:58 IST)
ಬೆಂಗಳೂರು : ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಎಸ್ ಪುಷ್ಪಾ ಅವರು KSRTC, BMTC ಸೇರಿದಂತೆ 4 ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದು ಸಾರಿಗೆ ಸಂಸ್ಥೆಗಳಿಗೆ ಉಂಟಾಗುವ ಆರ್ಥಿಕ ಹೊರೆ ಸರಿದೂಗಿಸಲು ಹೆಚ್ಚುವರಿ ವಿಶೇಷ ಅನುದಾನ ಒದಗಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
 
ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಯ ಹೆಚ್ಚುವರಿ ವೆಚ್ಚ ನಿಭಾಯಿಸಲು ಹಾಗೂ ವೇತನ ಪಾವತಿ, ಇಂಧನ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ ಒದಗಿಸಲು ಸಾಧ್ಯವಿಲ್ಲ. ನಿಗಮಗಳು ಆಂತರಿಕ ಸಂಪನ್ಮೂಲಗಳಿಂದಲೇ ಇದನ್ನು ಭರಿಸುವಂತೆ ಜೂನ್ 7ರಂದು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಶಕ್ತಿ ಯೋಜನೆಗೆ ಸರ್ಕಾರದಿಂದ 4 ಸಾವಿರ ಕೋಟಿಯಷ್ಟು ವಾರ್ಷಿಕ ಹೆಚ್ಚುವರಿ ಹೊರೆ ತಗುಲಲಿದೆ. ಹೀಗಾಗಿ ನಿಗಮಗಳಿಗೆ ಹೆಚ್ಚುವರಿ ವಿಶೇಷ ಅನುದಾನ ಒದಗಿಸಲು ಅವಕಾಶ ಇಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಂಡಮಾರುತದ ಅಬ್ಬರಕ್ಕೆ ಇಬ್ಬರು ಬಲಿ