ಕಾರ್ಪೊರೇಟರ್ ಬಂಧನ ಮಾಡಬೇಕಂತೆ…!

Webdunia
ಬುಧವಾರ, 6 ಮಾರ್ಚ್ 2019 (18:34 IST)
ಸರಕಾರಿ ಅಧಿಕಾರಿಗೆ ಚಪ್ಪಲಿ ತೋರಿಸಿ ಹಲ್ಲೆಗೆ ಯತ್ನ ನಡೆಸಿರುವ ಕಾರ್ಪೋರೇಟರ್ ಬಂಧನ ಮಾಡಬೇಕೆಂಬ ಆಗ್ರಹ ಬಲವಾಗಿ ಕೇಳಿಬರುತ್ತಿದೆ.

ಇತ್ತೀಚೆಗೆ ಶಿವಮೊಗ್ಗದ ಆರ್.ಟಿ.ಓ. ಕಚೇರಿಯಲ್ಲಿ ದಲಿತ ಅಧಿಕಾರಿಗಳಿಗೆ ಚಪ್ಪಲಿ ತೋರಿಸಿ ಹಲ್ಲೆಗೆ ಯತ್ನಿಸಿದ್ದಲ್ಲದೇ, ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಪಾಲಿಕೆಯ ಬಿಜೆಪಿ ಕಾರ್ಪೋರೇಟರ್ ವಿಶ್ವಾಸ್ ಹಾಗೂ ಮಧ್ಯವರ್ತಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಲಾಗಿದೆ. ಇವರ ವಿರುದ್ಧ ರೌಡಿಶೀಟ್ ತೆರೆಯಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಈ ಘಟನೆಯಿಂದ ಆತಂಕಗೊಂಡಿರುವ ಆರ್.ಟಿ.ಓ. ಕಚೇರಿ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡಬೇಕೆಂದರು. ಕಾರ್ಪೋರೇಟರ್ ಆಗಿರುವ ವಿಶ್ವಾಸ್ ಹಾಗೂ ಆರ್.ಟಿ.ಓ. ಕಚೇರಿ ಏಜೆಂಟ್ ಗಳಾಗಿದ್ದ ಕೆಲವರು, ಎ.ಆರ್.ಟಿ.ಓ. ಆಗಿದ್ದ ಶ್ರೀನಿವಾಸ್ ಎಂಬುವವರಿಗೆ ಚಪ್ಪಲಿ ತೋರಿಸಿ ಬೆದರಿಸಿದ್ದು, ಇದು ಜಾತಿ ನಿಂದನೆಯಾಗಿದೆ.  ಈ ಘಟನೆ ನಂತರ ಕಾಣದ ಕೈಗಳ ಕೈವಾಡದಿಂದ ಶ್ರೀನಿವಾಸಯ್ಯರನ್ನು ವರ್ಗಾವಣೆ ಮಾಡಿಸಲಾಗಿದೆ ಎಂದು ದೂರಿದರು. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments