Publish Date: Sat, 02 Dec 2017 (14:08 IST)
Updated Date: Sat, 02 Dec 2017 (14:09 IST)
ದೇಶದಲ್ಲಿಯೇ ಭ್ರಷ್ಟಾಚಾರ, ಅಪರಾಧಗಳ ಪಟ್ಟಿಗಳಲ್ಲಿ ಅಗ್ರಸ್ಥಾನಕ್ಕೇರಿಸಿದ ಕೀರ್ತಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಬೇಕು ಎಂದು ಬಿಜೆಪಿ ಮುಖಂಡ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ತುಂಬಾ ಅಹಂಕಾರದಿಂದ ಮೆರೆಯುತ್ತಿದ್ದಾರೆ. ಕಳೆದ ನಾಲ್ಕುವರೆ ವರ್ಷಗಳಲ್ಲಿ ಯಾವುದೇ ಸಾಧನೆ ಮಾಡದೇ ಕೇವಲ ಹೇಳಿಕೆ ನೀಡುವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿದಿದೆ. ಪ್ರತಿನಿತ್ಯ ಅಪರಾಧ ಪ್ರಕರಣಗಳು ವರದಿಯಾಗುತ್ತಿವೆ. ಅಪರಾಧಿಗಳಿಗೆ ಸರಕಾರದ ಯಾವುದೇ ಭಯವಿಲ್ಲ. ಲೈಂಗಿಕ ದೌರ್ಜನ್ಯಗಳು ಮಿತಿಮೀರುತ್ತಿವೆ ಎಂದು ಕಿಡಿಕಾರಿದರು.
ಸಿಎಂ ಸಿದ್ದರಾಮಯ್ಯ ಲಿಂಗಾಯುತ ಧರ್ಮವನ್ನೇ ಒಡೆಯಲು ಹೊರಟಿದ್ದಾರೆ. ಜಾತಿ ಕಲಹ ಷಡ್ಯಂತ್ರ ರೂಪಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಮಾಜಿ ಡಿಸಿಎಂ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.