ದೀಪಾವಳಿಗೆ ದಿನಗಣನೆ: ನೈಋತ್ಯ ರೈಲ್ವೆಯಿಂದ ಪ್ರಯಾಣಿಕರಿಗೆ ಗುಡ್‌ನ್ಯೂಸ್

Sampriya
ಸೋಮವಾರ, 13 ಅಕ್ಟೋಬರ್ 2025 (19:41 IST)
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದುಇದೀಗ ಪ್ರಯಾಣಿಕರಿಗೆ ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳಲು ಓಡಾಡಲಿದೆ.

ಪ್ರಯಾಣಿಕರಿಗೆ ಅನುಕೂಲವಾಗಲೆಂದು ವಿಶೇಷ ರೈಲುಗಳು ಹುಬ್ಬಳ್ಳಿ, ಮಂಗಳೂರು ಹಾಗೂ ಬೆಂಗಳೂರು ನಡುವೆ ಸಂಚರಿಸಲಿದ್ದು, ಜನರ ಸಂಚಾರಕ್ಕೆ ಅನುಕೂಲ ಮಾಡಿಕೊಡಲಿದೆ. 

ಇಲ್ಲಿದೆ ವಿಶೇಷ ರೈಲುಗಳ ಮಾಹಿತಿ: 

1. ರೈಲು ಸಂಖ್ಯೆ 07353/07354: ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಇದೇ
17ರಂದು ಸಂಜೆ 4ಕ್ಕೆ ಹೊರಟು ಮಾರನೇ ದಿನ ಬೆಳಗ್ಗೆ 11.15ಕ್ಕೆ ಮಂಗಳೂರು ತಲುಪಲಿದೆ. 

ಈ ರೈಲು ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ರೈಲು ಸಂಖ್ಯೆ 07354: ಮಂಗಳೂರು ಜಂಕ್ಷನ್–ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು. ಇದೇ 18ರಂದು ಮಧ್ಯಾಹ್ನ 2:35ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು, ಅದೇ ದಿನ ರಾತ್ರಿ 11:15ಕ್ಕೆ ಯಶವಂತಪುರ ತಲುಪಲಿದೆ.

ರೈಲು ಸಂಖ್ಯೆ 06229: ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಇದೇ ಅ.19ರಂದು ರಾತ್ರಿ 12:15ಕ್ಕೆ ಯಶವಂತಪುರದಿಂದ ಹೊರಟು, ಅದೇ ದಿನ ಬೆಳಗ್ಗೆ 11:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. 

ರೈಲು ಸಂಖ್ಯೆ 06230: ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಇದೇ ಅ.19ರಂದು 2:35 ಗಂಟೆಗೆ ಮಂಗಳೂರು ಜಂಕ್ಷನ್‌ನಿಂದ ಹೊರಟು, ಮರುದಿನ 12:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. 

3. ರೈಲು ಸಂಖ್ಯೆ 06507/06508 ಬೆಳಗಾವಿ-ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ (1 ಟ್ರಿಪ್):

ರೈಲು ಸಂಖ್ಯೆ 06507: ಬೆಳಗಾವಿ -ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಇದೇ ಅ.18ರಂದು 8:00 ಗಂಟೆಗೆ ಬೆಳಗಾವಿಯಿಂದ ಹೊರಟು, ಅದೇ ದಿನ ರಾತ್ರಿ 07:45 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ರೈಲು ಸಂಖ್ಯೆ 06508: ಅ.18ರಂದು ರಾತ್ರಿ 09:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಅ.19ರಂದು ಬೆಳಗ್ಗೆ 08:35 ಗಂಟೆಗೆ ಬೆಳಗಾವಿಯನ್ನು ತಲುಪಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿಂದಿನ ಉದ್ದೇಶ ಬಿಚ್ಚಿಟ್ಟ ಬಿಎಸ್‌ ಯಡಿಯೂರಪ್ಪ

ದೀಪಾವಳಿಗೆ ದಿನಗಣನೆ: ನೈಋತ್ಯ ರೈಲ್ವೆಯಿಂದ ಪ್ರಯಾಣಿಕರಿಗೆ ಗುಡ್‌ನ್ಯೂಸ್

ರೈತರ ಕೆಲಸ ಮಾಡದ ಅಧಿಕಾರಿಗಳಿಗೆ ಕ್ಲಾಸ್‌ ತೆಗೆದುಕೊಂಡ ಶಾಸಕ ಎಚ್‌ ಸಿ ಬಾಲಕೃಷ್ಣ

ದಲಿತ ಎನಿಸಿಕೊಳ್ಳಲೂ ಪ್ರಿಯಾಂಕ್ ಖರ್ಗೆಗೆ ಯೋಗ್ಯತೆಯಿಲ್ಲ: ಛಲವಾದಿ ನಾರಾಯಣಸ್ವಾಮಿ

ಪ್ರಿಯಾಂಕ್‌ ಖರ್ಗೆಗೆ ಅಪ್ರಸ್ತುತ ಹೇಳಿಕೆ ಕೊಟ್ಟು ಪ್ರಚಾರದಲ್ಲಿರುವ ಗೀಳು: ಅಶ್ವಥ್ ನಾರಾಯಣ್ ವ್ಯಂಗ್ಯ

ಮುಂದಿನ ಸುದ್ದಿ
Show comments