Select Your Language

Notifications

webdunia
webdunia
webdunia
Sunday, 6 April 2025
webdunia

ದಸರಾ ಮಹೋತ್ಸವಕ್ಕೆ ಕ್ಷಣಗಣನೆ-ಅರಮನೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧ

ದಸರಾ ಮಹೋತ್ಸವಕ್ಕೆ ಕ್ಷಣಗಣನೆ
mysore , ಮಂಗಳವಾರ, 20 ಸೆಪ್ಟಂಬರ್ 2022 (20:46 IST)
ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಈ ನಡುವೆ ಇಂದು ಸಿಂಹಾಸನ ಜೋಡಣಾ ಕಾರ್ಯ  ಹಿನ್ನೆಲೆ ಅರಮನೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆವರಗೆ ಅರಮನೆಗೆ ಸಾರ್ವಜನಿಕರ ಪ್ರವೇಶ ಬಂದ್ ಮಾಡಲಾಗಿದೆ. ರತ್ನಖಚಿತ ಸಿಂಹಾಸನ ಜೋಡಣಾ ಕಾರ್ಯ ಆರಂಭವಾಗಿದ್ದು ಸ್ಟ್ರಾಂಗ್ ರೂಂನಲ್ಲಿರುವ ಸಿಂಹಾಸನ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಜೋಡಣೆ ಮಾಡಲಾಗುತ್ತಿದೆ.ದರ್ಬಾರ್ ಹಾಲ್‌ನಲ್ಲಿ ಪೂಜಾ ಕೈಂಕರ್ಯ ನೆರವೇರಿದ್ದು, ಕನ್ನಡಿ ತೊಟ್ಟಿಯಲ್ಲಿ ಭದ್ರಾಸನ ಜೋಡಣೆ, ಅರಮನೆಯ ಪುರೋಹಿತರ ಸಮ್ಮುಖದಲ್ಲಿ ಗಣಪತಿ ಹೋಮ, ಚಾಮುಂಡಿಪೂಜೆ, ಶಾಂತಿ ಹೋಮ ಮಾಡಲಾಗುತ್ತಿದೆ.
 
ನವರಾತ್ರಿ ವೇಳೆ ರಾಜರು ಸಿಂಹಾಸನರೂಢರಾಗಿ ಖಾಸಗಿ ದರ್ಬಾರ್ ನಡೆಸುವ ಸಂಪ್ರದಾಯವಿದ್ದು ಅಂತೆಯೇ ಸೆ.26 ರಿಂದ ಖಾಸಗಿ ದರ್ಬಾರ್ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ನಿವಾಸಕ್ಕೆ ಯಡಿಯೂರಪ್ಪ ಭೇಟಿ