Webdunia - Bharat's app for daily news and videos

Install App

ಪಂಚ ರಾಜ್ಯ ಮತ ಎಣಿಕೆ

Webdunia
ಗುರುವಾರ, 10 ಮಾರ್ಚ್ 2022 (20:25 IST)
ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ ವಿಧಾನಸಭಾ ಚುನಾವಣೆಗಳ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿ ಕನಿಷ್ಠ ಮೂರು ದೊಡ್ಡ ರಾಜ್ಯಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇಟ್ಟುಕೊಂಡಿದೆ.
ಎಲ್ಲೆಡೆ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದ್ದು, ಐದು ರಾಜ್ಯಗಳಲ್ಲಿ ಮತ ಎಣಿಕೆಗೆ 50 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 1,200ಕ್ಕೂ ಹೆಚ್ಚು ಎಣಿಕೆ ಕೊಠಡಿಗಳು ಸಜ್ಜಾಗಿವೆ.
ಉತ್ತರ ಪ್ರದೇಶ ಹಾಗೂ ಮಣಿಪುರದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿದ್ದು, ಉತ್ತರಾಖಂಡದಲ್ಲೂ ಕಾಂಗ್ರೆಸ್‌ ಸ್ಪರ್ಧೆ ನಡುವೆಯೂ ಬಿಜೆಪಿ ಮುನ್ನಡೆ ಸಾಧಿಸಲಿದೆ ಎಂದು ಅಂದಾಜಿಸಲಾಗಿದೆ.
ಪಂಜಾಬ್‌ನಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಅಧಿಕಾರದ ಚುಕ್ಕಾಣಿ ಹಿಡಿಯುವ ಕನಸು ಕಾಣುತ್ತಿದ್ದರೆ, ಗೋವಾದಲ್ಲಿ ಅತಂತ್ರ ವಿಧಾನಸಭೆ ಏರ್ಪಡುವ ಸಾಧ್ಯತೆಯ ನಡುವೆಯೇ ಬಿರುಸಿನ ರೆಸಾರ್ಟ್ ರಾಜಕೀಯ ಆರಂಭವಾಗಿದೆ.
ಎಲ್ಲ ಕೇಂದ್ರಗಳಲ್ಲಿ ಬೆಳಗ್ಗೆ 8ಕ್ಕೆ ಮತ ಎಣಿಕೆ ಆರಂಭವಾಗಲಿದ್ದು, ಕೆಲವೇ ಗಂಟೆಗಳಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ. ಮತಯಂತ್ರಗಳಲ್ಲಿ ವಂಚನೆ ಮತ್ತು ಇವಿಎಂಗಳ ತಿರುಚುವಿಕೆ ಆರೋಪಗಳು ಕೇಳಿಬಂದಿದ್ದು, ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅಧಿಕಾರಿಗಳು ಅಕ್ರಮವಾಗಿ ಮತಯಂತ್ರಗಳನ್ನು ಸಾಗಿಸುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರು ಆಪಾದಿಸಿದ್ದಾರೆ. ಈ ಆರೋಪದ ಬೆನ್ನಲ್ಲೇ ವಾರಣಾಸಿಯಲ್ಲಿ ಮೂವರು ಅಧಿಕಾರಿಗಳನ್ನು ಚುನಾವಣಾ ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ.
403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಬಹುಮತಕ್ಕೆ 202 ಸ್ಥಾನಗಳ ಅಗತ್ಯವಿದ್ದು, ಬಿಜೆಪಿಗೆ 230 ಸ್ಥಾನಗಳಲ್ಲಿ ಬಹುತೇಕ ನಿರ್ಗಮನ ಸಮೀಕ್ಷೆಗಳು ಅಂದಾಜಿಸಿವೆ. ಸಮಾಜವಾದಿ ಪಕ್ಷ ಗರಿಷ್ಠ 160 ಸ್ಥಾನಗಳನ್ನು ಗೆಲ್ಲಬಹುದು ಎಂದು ಭವಿಷ್ಯ ನುಡಿದಿವೆ. ಕಾಂಗ್ರೆಸ್ ಪಕ್ಷ ಒಂದಂಕಿಯಲ್ಲೇ ಉಳಿಯಲಿದೆ.
ಪಂಜಾಬ್‌ನಲ್ಲಿ ಆಮ್ ಆದ್ಮಿ ಪಾರ್ಟಿ ಬಹುಮತಕ್ಕೆ ಅಗತ್ಯವಿರು 59 ಸ್ಥಾನಗಳ ಗಡಿಯನ್ನು ದಾಟುವ ಎಲ್ಲ ಸಾಧ್ಯತೆಗಳಿವೆ. ಕಾಂಗ್ರೆಸ್ ಹಾಗೂ ಅಕಾಲಿದಳ ಎರಡನೇ ಸ್ಥಾನಕ್ಕೆ ಪೈಪೋಟಿ ನಡೆಸಲಿದ್ದಾರೆ, ಬಿಜೆಪಿ ನಂತರದ ಸ್ಥಾನ ಗಳಿಸುವ ನಿರೀಕ್ಷೆ ಇದೆ. 40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಅತಂತ್ರ ಸ್ಥಿತಿ ಏರ್ಪಡುವ ಸಾಧ್ಯತೆಯನ್ನು ಸಮೀಕ್ಷೆಗಳು ಅಂದಾಜಿಸಿವೆ.
ಕಳೆದ ನಾಲ್ಕು ವರ್ಷಗಳಲ್ಲಿ ಮೂವರು ಮುಖ್ಯಮಂತ್ರಿಗಳನ್ನು ಬದಲಿಸಿದರೂ, ಬಿಜೆಪಿ ಉತ್ತರಾಖಂಡದಲ್ಲಿ ಅಧಿಕಾರ ಉಳಿಸಿಕೊಳ್ಳುತ್ತದೆ ಎಂದು ನಿರೀಕ್ಷಿಸಲಾಗಿದೆ. ತಮ್ಮ ಪಕ್ಷ 45ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments