Select Your Language

Notifications

webdunia
webdunia
webdunia
webdunia

ಗೃಹಲಕ್ಷ್ಮಿ ಯೋಜನೆ ಜಾರಿಗೆ ಕೌಂಟ್‍ಡೌನ್

ಗೃಹಲಕ್ಷ್ಮಿ ಯೋಜನೆ ಜಾರಿಗೆ ಕೌಂಟ್‍ಡೌನ್
ಬೆಂಗಳೂರು , ಬುಧವಾರ, 19 ಜುಲೈ 2023 (09:46 IST)
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ ಇಂದು ಸಂಜೆ ಚಾಲನೆ ಸಿಗಲಿದೆ. ಸಿಎಂ ಸಿದ್ದರಾಮಯ್ಯ ಗೃಹಲಕ್ಷ್ಮಿ ಅಪ್ಲಿಕೇಶನ್  ಬಿಡುಗಡೆ ಮಾಡಲಿದ್ದು, ಸಂಜೆಯಿಂದ ಅರ್ಜಿ ಸ್ವೀಕಾರ ಆರಂಭ ಆಗಲಿದೆ.

ಈ ನೋಂದಣಿಯನ್ನು ಮಹಿಳೆಯರೇ ಮಾಡಲು ಸಾಧ್ಯವಿಲ್ಲ. ಸರ್ಕಾರ ನಿಗದಿ ಮಾಡಿದ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಯಾವಾಗ ಎಂದು ಸರ್ಕಾರವೇ ತಿಳಿಸುತ್ತದೆ. ಜೊತೆಗೆ ಈ ನೋಂದಣಿಗೆ ಯಾವುದೇ ಶುಲ್ಕವಿಲ್ಲ. ಅರ್ಜಿ ಸಲ್ಲಿಸಲು ಡೆಡ್ಲೈನ್ ಕೂಡ ನಿಗದಿಯಾಗಿಲ್ಲ. ಈ ಯೋಜನೆಯಡಿ ಆಗಸ್ಟ್ 16ರ ನಂತರ ಬಿಪಿಎಲ್ ಕುಟುಂಬದ ಒಡತಿ ಖಾತೆಗೆ ಪ್ರತಿ ತಿಂಗಳು 2 ಸಾವಿರ ಹಣ ಜಮೆ ಮಾಡಲಾಗುತ್ತದೆ. 

ಯಾರು ಅರ್ಹರು?

* ಪಡಿತರ ಚೀಟಿಯಲ್ಲಿರುವ ಯಜಮಾನಿ ನೋಂದಾಯಿಸಿಕೊಳ್ಳಲು ಅರ್ಹ
* ಫಲಾನುಭವಿ ಮಹಿಳೆ, ಅವರ ಪತಿ ಆದಾಯ ತೆರಿಗೆ ಪಾವತಿದಾರನಾಗಿರಬಾರದು
* ಫಲಾನುಭವಿ ಮಹಿಳೆ, ಅವರ ಪತಿ ಜಿಎಸ್ಟಿ ತೆರಿಗೆ ಪಾವತಿದಾರನಾಗಿರಬಾರದು
* ನೋಂದಾಯಿತ ಖಾತೆಗೆ ಪ್ರತಿ ತಿಂಗಳು ಡಿಬಿಟಿ ಮೂಲಕ 2000 ರೂ. ಜಮೆ
* ಫಲಾನುಭವಿ ಇಚ್ಚಿಸಿದಲ್ಲಿ ಪರ್ಯಾಯ ಬ್ಯಾಂಕ್ ಖಾತೆ ನೀಡಬಹುದು
* ಪರ್ಯಾಯ ಬ್ಯಾಂಕ್ ಖಾತೆಗೆ ಆರ್ಟಿಜಿಎಸ್ ಮೂಲಕ ಪ್ರತಿ ತಿಂಗಳು 2000 ರೂ.ಜಮೆ

 

Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆ : ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ