Select Your Language

Notifications

webdunia
webdunia
webdunia
webdunia

ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ

ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ
ತಲಕಾವೇರಿ , ಸೋಮವಾರ, 17 ಅಕ್ಟೋಬರ್ 2022 (19:25 IST)
ಕರುನಾಡ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಸಿದ್ದತೆಗಳು ಭರದಿಂದ ನಡೆಯುತ್ತಿವೆ. ವರ್ಷಕ್ಕೊಮ್ಮೆ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇಶದ ವಿವಿಧೆಡೆಗಳಿಂದ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸಲಿದ್ದು, ಇದಕ್ಕಾಗಿ ತಲಕಾವೇರಿ ಹಾಗೂ ತ್ರಿವೇಣಿ ಸಂಗಮ ಭಾಗಮಂಡಲ ಸಕಲ ರೀತಿಯಲ್ಲಿ ಸಿದ್ದತೆ ನಡೆಯುತ್ತಿದೆ.. ಕೊಡವರ ಕುಲದೇವತೆ ಕರ್ನಾಟಕದ ಜೀವನದಿ ಕಾವೇರಿಯ ತೀರ್ಥೋದ್ಭಕಕ್ಕೆ ಜಿಲ್ಲಾಡಳಿತ ಕೂಡ ಈಗಾಗಲೇ ತಯಾರಿ ಮಾಡಿಕೊಂಡಿದೆ. ಇಂದು ಸಂಜೆ 7 ಗಂಟೆ 21 ನಿಮಿಷಕ್ಕೆ ಮೇಷ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಬ್ರಹ್ಮ ಕುಂಡಿಕೆಯಿಂದ ಪವಿತ್ರ ತೀರ್ಥ ಉಕ್ಕಿಬರಲಿದೆ. ಈ ವಿಸ್ಮಯ ನೋಡಲು ಜನರು ಕಾತರರಾಗಿ ಕಾಯುತ್ತಿದ್ದಾರೆ. ವಾರದಿಂದಲೇ ನಾನಾ ಪೂಜಾ ಕೈಂಕರ್ಯಗಳು ನಡೆದಿದ್ದು, ಅರ್ಚಕರ ತಂಡ ಕೂಡ ಕಾವೇರಿ ಮಾತೆಯ ಸ್ವಾಗತಕ್ಕೆ ಸಜ್ಜಾಗಿದೆ.. ಈ ಬಾರಿ ಜಲಪ್ರಳಯದಿಂದ ತತ್ತರಿಸಿರೋ ಜನತೆಗೆ ಕಾವೇರಿ ತಾಯಿ ತೀರ್ಥರೂಪಿಣಿಯಾಗಿ ಬಂದು ಒಳ್ಳೇದು ಮಾಡಲಿದ್ದಾಳೆ ಅನ್ನೋ ನಂಬಿಕೆ ಭಕ್ತಗಣದ್ದಾಗಿದೆ.. ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸೋ ಹಿನ್ನೆಲೆಯಲ್ಲಿ 10 ಕಿಲೋ ಮೀಟರ್ ದೂರದಿಂದಲೇ ಲೈಟಿಂಗ್ ವ್ಯವಸ್ಥೆಗಾಗಿ 500ಕ್ಕೂ ಹೆಚ್ಚು ಟ್ಯೂಬ್ ಲೈಟ್​ಗಳು, ತಾತ್ಕಾಲಿಕ ಶೌಚಾಲಯ, ಅನ್ನದಾನಕ್ಕೆ ವ್ಯವಸ್ಥೆ, ಭದ್ರತೆಗಾಗಿ ಹೆಚ್ಚಿನ ಸಿಸಿಟಿವಿ ಸೇರಿದಂತೆ 400ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.. ಕಾವೇರಿ ಮಾತೆಯ ದರ್ಶನಕ್ಕೆ ಸಹಸ್ರಾರು ಭಕ್ತರು ಲಗ್ಗೆಯಿಡುತ್ತಿದ್ದು, ಯಾವುದೇ ರೀತಿಯಲ್ಲಿ ನೂಕು ನುಗ್ಗಲು ಉಂಟಾಗದಂತೆ ಏಕಮುಖ ಸಂಚಾರದಲ್ಲಿ ಬ್ಯಾರಿಕೇಡ್ ಹಾಕಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಠದ ಗೇಟಿಗೆ ನೇಣುಬಿಗಿದುಕೊಂಡು ಸೂಸೈಡ್