Publish Date: Tue, 22 Oct 2019 (17:28 IST)
Updated Date: Tue, 22 Oct 2019 (17:31 IST)
ಪ್ರತಿವರ್ಷದಂತೆ ಈ ಬಾರಿಯೂ ಕಿತ್ತೂರು ಉತ್ಸವ ಅದ್ಧೂರಿ ಆಚರಣೆಗೆ ಕ್ಷಣಗಣನೆ ಶುರುವಾಗಿದೆ.
ಅಕ್ಟೋಬರ್ 23, 24 ಹಾಗೂ 25 ರಂದು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಕಿತ್ತೂರು ಉತ್ಸವ ಆಚರಿಸಲಾಗುವುದು. ಹೀಗಂತ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹೇಳಿದ್ದಾರೆ.
ಕಿತ್ತೂರು ಉತ್ಸವದಲ್ಲಿ ಸ್ಥಳೀಯ ಹಾಗೂ ಹೊರಗಿನ ಕಲಾವಿದರಿಗೆ ಅವಕಾಶ ನೀಡಲಾಗಿದೆ. ಉತ್ಸವದಲ್ಲಿ ಹೆಚ್ಚಿನ ರೀತಿಯಲ್ಲಿ ಮಳಿಗೆಗಳು ಬರುವ ಸಾಧ್ಯತೆ ಇದೆ.
ಕಿತ್ತೂರು ಉತ್ಸವಕ್ಕೆ 1 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ರಾಜ್ಯ ಮಟ್ಟದ ಕೃಷಿ ವಿಚಾರ ಸಂಕಿರಣ, ರಾಜ್ಯ ಮಟ್ಟದ ಕವಿ ಗೋಷ್ಠಿ, ಪುರುಷ ಹಾಗೂ ಮಹಿಳೆಯರಿಗೆ ಕುಸ್ತಿ, ಮುಕ್ತ ಕಬಡ್ಡಿ, ವಾಲಿಬಾಲ್, ಸೈಕ್ಲಿಂಗ್ ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಿ.ಎಂ. ಬಿ.ಎಸ್.ಯಡಿಯೂರಪ್ಪ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.