ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ-2024ಕ್ಕೆ ದಿನಗಣನೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ತಯಾರಿ ಜೋರಾಗಿಯೇ ನಡೆಯುತ್ತಿದೆ.
ಮೈಸೂರು ಅರಮನೆಯಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆ ಜಂಬೂಸವಾರಿ ಮೆರವಣಿಗೆಗೆ ಪೂರ್ವಸಿದ್ಧತೆಯ ಭಾಗವಾಗಿ ನಗರದಲ್ಲಿ ಪರೇಡ್ ಮಾಡುತ್ತಿದೆ. ಆನೆಗಳಿಗೆ ಇಂದಿನಿಂದ ಮರಳು ಮೂಟೆ ತಾಲೀಮು ಆರಂಭವಾಗಿದೆ. ಮರಳು ಮೂಟೆ ಹೊರಿಸುವ ಮೂಲಕ ಜಂಬೂ ಸವಾರಿಗೆ ಆನೆಗಳನ್ನು ತಯಾರಿ ಮಾಡಲಾಗುತ್ತಿದೆ.
ಅರಮನೆಯ ಆವರಣದಲ್ಲಿ ಆನೆಗಳಿಗೆ ಮರಳು ಮೂಟೆ ಹೊರಿಸುವ ಮುನ್ನ ಕೋಡಿ ಸೋಮೇಶ್ವರ ದೇವಸ್ಥಾನದ ಮುಂದೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಮ್ದಾ, ತೊಟ್ಟಿಲು, ಹಗ್ಗ ಹಾಗೂ ಮರಳು ಮೂಟೆಗೂ ಕೂಡ ಪೂಜೆ ಮಾಡಲಾಯಿತು. ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಪೂಜೆ ಸಲ್ಲಿಸುವ ಮೂಲಕ ದಸರಾ ಆನೆಗಳಿಗೆ ಮರಳು ಮೂಟೆ ಹೊರಿಸುವ ತಾಲೀಮಿಗೆ ಚಾಲನೆ ಸಿಕ್ಕಿತು.
ಡಿಸಿಎಫ್ ಡಾ.ಐ.ಬಿ.ಪ್ರಭುಗೌಡ ನೇತೃತ್ವದಲ್ಲಿ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು, ಲಕ್ಷ್ಮೀ, ವರಲಕ್ಷ್ಮೀ ಆನೆಗಳಿಗೆ ಪೂಜೆ ಮಾಡಲಾಯಿತು.<>