ಬೆಂಗಳೂರು: ಹೊಸ ವರ್ಷವನ್ನು ಸ್ವಾಗತಿಸಲು ದಿನಗಣನೆ ಶುರುವಾಗಿದ್ದು, ಬೆಂಗಳೂರು ನಗರದಲ್ಲಿ ಜನರ ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ ಬಿಗಿ ಭದ್ರತೆ ನಿಯೋಜನೆಯೊಂದಿಗೆ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ, ಪ್ರತಿ ವರ್ಷದಂತೆ ಬೆಂಗಳೂರು ನಗರದಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಹಿಂದಿನ ವರ್ಷದ ಘಟನೆಗಳು ಮತ್ತು ಅನುಭವದ ಆಧಾರದ ಮೇಲೆ ಹೆಚ್ಚಿನ ಭದ್ರತೆ ಕೈಗೊಂಡಿದ್ದೇವೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಪ್ರದೇಶಗಳನ್ನು ನಾವು ಗುರುತಿಸಿದ್ದೇವೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಜಂಕ್ಷನ್, ಕೋರಮಂಗಲ, ಇಂದಿರಾನಗರ ಮತ್ತಿತರ ಕಡೆಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಆಯೋಜಿಸಲಾಗಿದೆ ಎಂದರು.
ಬಿಬಿಎಂಪಿ, ಮೆಟ್ರೋ ಮತ್ತು ಇತರ ಸಂಸ್ಥೆಗಳೊಂದಿಗೆ ಸಭೆ, ಚರ್ಚೆಗಳನ್ನು ನಡೆಸಲಾಗಿದೆ. ರಾತ್ರಿ ಹೊತ್ತಿನಲ್ಲಿ ದೀಪಾಲಂಕಾರ, ಬ್ಯಾರಿಕೇಡ್ ಹಾಕಲು ಹಾಗೂ ಮೆಟ್ರೊ ಸೇವೆಗೆ ಮನವಿ ಮಾಡಲಾಗಿದೆ. ಅದಲ್ಲದೆ ಓಲಾ ಮತ್ತು ಉಬರ್‌ನ ಪ್ರತಿನಿಧಿಗಳೊಂದಿಗೆ ಪ್ರತ್ಯೇಕ ಸಭೆ ಮಾಡಲಾಗಿದೆ.