ಹೊಸ ವರ್ಷಚಾರಣೆಗೆ ದಿನಗಣನೆ: ಸಿಲಿಕಾನ್ ಸಿಟಿಯಲ್ಲಿ ಬಿಗಿ ಭದ್ರತೆ ಕೈಗೊಂಡ ಖಾಕಿ

Sampriya
ಶನಿವಾರ, 28 ಡಿಸೆಂಬರ್ 2024 (17:09 IST)
Photo Courtesy X
ಬೆಂಗಳೂರು: ಹೊಸ ವರ್ಷವನ್ನು ಸ್ವಾಗತಿಸಲು ದಿನಗಣನೆ ಶುರುವಾಗಿದ್ದು, ಬೆಂಗಳೂರು ನಗರದಲ್ಲಿ ಜನರ ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ ಬಿಗಿ ಭದ್ರತೆ ನಿಯೋಜನೆಯೊಂದಿಗೆ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ, ಪ್ರತಿ ವರ್ಷದಂತೆ ಬೆಂಗಳೂರು ನಗರದಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಹಿಂದಿನ ವರ್ಷದ ಘಟನೆಗಳು ಮತ್ತು ಅನುಭವದ ಆಧಾರದ ಮೇಲೆ ಹೆಚ್ಚಿನ ಭದ್ರತೆ ಕೈಗೊಂಡಿದ್ದೇವೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಪ್ರದೇಶಗಳನ್ನು ನಾವು ಗುರುತಿಸಿದ್ದೇವೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಜಂಕ್ಷನ್, ಕೋರಮಂಗಲ, ಇಂದಿರಾನಗರ ಮತ್ತಿತರ ಕಡೆಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಆಯೋಜಿಸಲಾಗಿದೆ ಎಂದರು.

ಬಿಬಿಎಂಪಿ, ಮೆಟ್ರೋ ಮತ್ತು ಇತರ ಸಂಸ್ಥೆಗಳೊಂದಿಗೆ ಸಭೆ, ಚರ್ಚೆಗಳನ್ನು ನಡೆಸಲಾಗಿದೆ. ರಾತ್ರಿ ಹೊತ್ತಿನಲ್ಲಿ ದೀಪಾಲಂಕಾರ, ಬ್ಯಾರಿಕೇಡ್‌ ಹಾಕಲು ಹಾಗೂ ಮೆಟ್ರೊ ಸೇವೆಗೆ ಮನವಿ ಮಾಡಲಾಗಿದೆ. ಅದಲ್ಲದೆ ಓಲಾ ಮತ್ತು ಉಬರ್‌ನ ಪ್ರತಿನಿಧಿಗಳೊಂದಿಗೆ ಪ್ರತ್ಯೇಕ ಸಭೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments