Webdunia - Bharat's app for daily news and videos

Install App

ವಿಶ್ವ ವಿಖ್ಯಾತ ಐತಿಹಾಸಿಕ ಕರಗಕ್ಕೆ ಕ್ಷಣಗಣನೆ

Webdunia
ಬುಧವಾರ, 5 ಏಪ್ರಿಲ್ 2023 (19:06 IST)
ವಿಶ್ವ ವಿಖ್ಯಾತ ಐತಿಹಾಸಿಕ ಕರಗಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ರಾತ್ರಿ 12.30ಕ್ಕೆ ಕರಗ ಮಹೋತ್ಸವಕ್ಕೆ ವಿಜ್ರುಂಭಣೆಯಿಂದ ವಿದ್ಯುಕ್ತ ಚಾಲನೆ ದೊರೆಯಲಿದೆ,ಈ ಬಾರಿ  ಧರ್ಮಸ್ಥಳದ ಧರ್ಮಧೀಕಾರಿ ವಿರೇಂದ್ರ ಹೆಗಡೆಯವರು ಕರಗದಲ್ಲಿ ಭಾಗಿಯಾಗಲಿದ್ದು ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳುವ ಸಾಧ್ಯತೆ ಇದೆ, 
 
ಐತಿಹಾಸಿಕ ಬೆಂಗಳೂರು ಧರ್ಮರಾಯಸ್ವಾಮಿ ದ್ರೌಪದಿ ಕರಗ ಉತ್ಸವ ಈ ವರ್ಷ ಅದ್ದೂರಿಯಾಗಿ ನಡೆಯಲಿದೆ. ಕರಗ ಉತ್ಸವದ ಚಾಲನೆಗೆ ಕ್ಷಣಗಣನೆ ಆರಂಭವಾಗಿದ್ದು ನಾಳೆ ರಾತ್ರಿ 12.30ಕ್ಕೆ ದ್ರೌಪತಿ ಕರಗ ರತೋತ್ಸವಕ್ಕೆ ಚಾಲೆನೆ ಸಿಗಲಿದೆ. ಕಳೆದೊಂದು ವಾರದಿಂದ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರುತ್ತಿದ್ದು ಧರ್ಮರಾಯಸ್ವಾಮಿ ದೇವಸ್ಥಾನ ನವ ವಧುವಿನಂತೆ ಕಂಗೊಳಿಸುತ್ತಿದೆ. ಕರಗ ಸಾಗುವ ದಾರಿಯುದ್ದಕ್ಕೂ ರಸ್ತೆಯನ್ನ ಅಗಲೀಕರಣ ಮಾಡಿ ಸ್ವಚ್ಚಗೊಳಿಸಲಾಗಿದೆ, ವಿದ್ಯುತ್ ದೀಪ, ಹೂಗಳಿಂದ ಅಲಂಕಾರ ಮಾಡಲಾಗಿದೆ. ಈ ಭಾರಿಯೂ ಕೂಡ ಜ್ಞಾನೇಂದ್ರ ಅವರೇ ಕರಗ ಹೊರಲಿದ್ದಾರೆ.
 
ಇನ್ನು ಕರಗ ಮಹೊತ್ಸವಕ್ಕೆ ಬಿಬಿಎಂಪಿ, ಪೊಲೀಸ್ ಇಲಾಖೆ ಹಾಗೂ ಬೆಂಗಳೂರು ನಗರ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದೆ. ಪಾಲಿಕೆಯಿಂದ ಕರಗ ಉತ್ಸವಕ್ಕೆ ಒಂದು ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಡಿಸಿಪಿ ನೇತೃತ್ವದಲ್ಲಿ ದೇವಸ್ಥಾನದ ಸುತ್ತ ಮುತ್ತ ಹಾಗೂ ಕರಗ ಸಾಗುವ ಹಾದಿ ಉದ್ದಕ್ಕೂ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು ಸ್ಥಳೀಯ ಪೊಲೀಸರು ಹಾಗೂ 3 KSRP ತುಕಡಿ ನಿಯೋಜನೆ ಮಾಡಲಾಗಿದೆ. ವ್ಯಾಪಾರ ವಹಿವಾಟಿಗೆ ಕರಗ ಸಮಿತಿ ಎಲ್ಲಾ ಧರ್ಮದವರಿಗೂ ಅವಕಾಶ ಮಾಡಿಕೊಟ್ಟಿದೆ. ನಾಳೆ ಕರಗ ಸಾಗುವ ರೂಟ್ ಮ್ಯಾಪ್ ಅನ್ನ ಜಿಲ್ಲಾಡಳಿತ ಬಿಡುಗಡೆ ಮಾಡಿದ್ದು ಕರಗ ಸುಸೂತ್ರವಾಗಿ ನಡೆಯಲು ಪೊಲೀಸ್ ಇಲಾಖೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ,
 
ಕೊರೋನಾ ಕಾರಣಕ್ಕೆ ಕಳೆಗುಂದಿದ್ದ ಬೆಂಗಳೂರು ಕರಗ ಮಹೋತ್ಸವ ಈ ಬಾರಿ ಅದ್ದೂರಿಯಾಗಿ ನಡೆಯಲಿದೆ. ಈಗಾಗಲೇ ತಿಗಳರಪೇಟೆಯ ಧರ್ಮರಾಯ ದೇವಸ್ಥಾನದಲ್ಲಿ ಕರಗದ ಸಿದ್ಧತೆಗಳೆಲ್ಲಾ ಶುರುವಾಗಿದೆ.,ಒಂದು ಲಕ್ಷಕ್ಕೂ ಹೆಚ್ಚಿನ ಭಕ್ತರು ಪಾಲ್ಗೊಳ್ಳುವ ಹಿನ್ನೆಲೆ ಪೊಲೀಸರು ಬಿಗಿ ಭದ್ರತೆ ವಹಿಸಿದ್ದಾರೆ, ಅದ್ದೂರಿ ದ್ರೌಪತಿ ಕರಗವನ್ನು ಕಣ್ತುಂಬಿಕೊಳ್ಳಲು ಸಿಲಿಕಾನ್ ಸಿಟಿ ಜನ ಕಾತರರಾಗಿ ಕಾಯ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments