Select Your Language

Notifications

webdunia
webdunia
webdunia
webdunia

ಜೂ. 4ರಂದು ಲೋಕಸಭೆ ಚುನಾವಣೆ ಮತಎಣಿಕೆ: ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನಲ್ಲಿ ನಿಷೇಧಾಜ್ಞೆ

Bangalore Police

Sampriya

ಬೆಂಗಳೂರು , ಸೋಮವಾರ, 27 ಮೇ 2024 (17:40 IST)
Photo Courtesy X
ಬೆಂಗಳೂರು: ದೇಶದಾದ್ಯಂತ ಏಳು ಹಂತದಲ್ಲಿ ನಡೆಯುವ ಮತದಾನದ ಫಲಿತಾಂಶ ಜೂನ್‌ 4ರಂದು ಪ್ರಕಟವಾಲಿದೆ. ಈ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಕಮೀಷನರ್ ಬಿ. ದಯಾನಂದ್ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಏ. 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ನಡೆದಿತ್ತು. ಬೆಂಗಳೂರಿನ ಕ್ಷೇತ್ರಗಳ ಮತ ಎಣಿಕೆ ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು, ವಿಠಲ್ ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಹಾಗೂ ಜಯನಗರದ ಎಸ್.ಎಸ್.ಎಂ.ಆರ್.ವಿ. ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ.

ಕೆಲ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು, ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಪರ, ವಿರುದ್ಧ ಪ್ರತಿಭಟನೆ ನಡೆಸಿ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ನಷ್ಟವುಂಟುಮಾಡುವ ಸಾಧ್ಯತೆಗಳು ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಯಾವುದೇ ಮಾರಕಾಸ್ತ್ರಗಳೊಂದಿಗೆ ತಿರುಗಾಡಬಾರದು, ಬ್ಯಾನರ್‌ಗಳು ಹಾಕುವಂತಿಲ್ಲ,‌ ಪಟಾಕಿ ಸಿಡಿಸುವಂತಿಲ್ಲ. ಹಾಗೆಯೇ ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ ಎಂದು ಕಮಿಷನರ್‌ ಅವರ ಆದೇಶದಲ್ಲಿ ತಿಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮಸ್ಥಳಕ್ಕೆ ರೇವಣ್ಣ ಭೇಟಿ: ಕುಟುಂಬದ ಸದಸ್ಯರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಕೆ