Select Your Language

Notifications

webdunia
webdunia
webdunia
webdunia

ಕಾಂಗ್ರೆಸ್‌ಗೆ ಮತ ನೀಡಿದರೆ ದೇಶಕ್ಕೆ ಸುರಕ್ಷಿತವಲ್ಲ: ಆರ್‌.ಅಶೋಕ್ ವ್ಯಂಗ್ಯ

ಕಾಂಗ್ರೆಸ್‌ಗೆ ಮತ ನೀಡಿದರೆ ದೇಶಕ್ಕೆ ಸುರಕ್ಷಿತವಲ್ಲ: ಆರ್‌.ಅಶೋಕ್ ವ್ಯಂಗ್ಯ

Sampriya

ಕೋಲಾರ , ಗುರುವಾರ, 11 ಏಪ್ರಿಲ್ 2024 (15:03 IST)
ಕೋಲಾರ:  ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರು ರಾಹುಲ್ ಹೆಸರು ಹೇಳದೆ ಗ್ಯಾರಂಟಿ ಹೆಸರಲ್ಲಿ ಮತ ಕೇಳುತ್ತಿದೆ ವಿಪಕ್ಷ ನಾಯಕ ಆರ್‌.ಅಶೋಕ್ ವ್ಯಂಗ್ಯ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಲೋಕಸಭೆ ಚುನಾವಣೆಯ ಮೂಲಕ ನಮ್ಮ ದೇಶದ ಭವಿಷ್ಯವನ್ನು ನಿರ್ಧಾರ ಮಾಡಬಹುದು. ಕಾಂಗ್ರೆಸ್‌ಗೆ ಮತ ಹಾಕಿದರೆ ಭಷ್ಟಚಾರಕ್ಕೆ ಬೆಂಬಲ ನೀಡಿದಂತೆ. ಆದ್ದರಿಂದ ಈ ಬಾರಿಯೂ  ಅಭಿವೃದ್ಧಿ ಸಲುವಾಗಿ ಬಿಜೆಪಿಗೆ ಮತ ನೀಡಬೇಕು ಎಂದರು.

ಇನ್ನೂ ಲಾಲೂ ಪ್ರಸಾದ್‌ ಯಾದವ್‌, ಅರವಿಂದ ಕೇಜ್ರಿವಾಲ್‌, ಸೋನಿಯಾ ಗಾಂಧಿ ಎಲ್ಲರೂ ಜೈಲಲ್ಲಿದ್ದಾರೆ ಅಥವಾ ಜಾಮೀನಿನ ಮೇಲಿದ್ದಾರೆ. ಕಾಂಗ್ರೆಸ್‌ಗೆ ಮತ ನೀಡಿದರೆ ದೇಶದ ಅಭದ್ರತೆಗೆ ಬೆಂಬಲ ನೀಡಿದಂತಾಗುತ್ತದೆ.

ಮೋದಿ ಬಂದ ನಂತರ ಜಮ್ಮು - ಕಾಶ್ಮೀರಕ್ಕೆ ಸ್ವಾತಂತ್ರ್ಯ ದೊರೆತು ಪಾಕಿಸ್ತಾನದ ಚಟುವಟಿಕೆಗಳು ಸ್ಥಗಿತಗೊಂಡಿವೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ವಿಧಾನಸೌಧದಲ್ಲೇ ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದನ್ನು ನೋಡಿದ್ದೇವೆ. ಆದ್ದರಿಂದ ಕಾಂಗ್ರೆಸ್‌ಗೆ ಮತ ನೀಡಿದರೆ ದೇಶಕ್ಕೆ ಸುರಕ್ಷತೆ ಸಿಗುವುದಿಲ್ಲ ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಪಕ್ಷಕ್ಕೆ ವಿಶ್ವಾಸಾರ್ಹ ನಾಯಕತ್ವ ಇಲ್ಲ: ಯಡಿಯೂರಪ್ಪ