Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಪ್ರೀತಿಸಿ ವಿವಾಹವಾದ ತಿಂಗಳಿಗೆ ಜೋಡಿ ಸಾವು

webdunia
ಭಾನುವಾರ, 3 ಡಿಸೆಂಬರ್ 2017 (15:01 IST)
ಮನೆಯವರ ವಿರೋಧದ ನಡುವೆಯೂ ಪ್ರೀತಿಸಿ ವಿವಾಹ ಮಾಡಿಕೊಂಡಿದ್ದ ಜೋಡಿಯೂ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಹೂವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೈರವಾಡಗಿಯ ಸಂಗಮೇಶ ಕುಂಬಾರ (30) ಹಾಗೂ ಹನುಮವ್ವ (24) ಅವರು ಕಳೆದ ತಿಂಗಳು ವಿವಾಹ ಮಾಡಿಕೊಂಡಿದ್ದರು. ಇದಕ್ಕೆ ಮನೆಯವರ ವಿರೋಧ ವ್ಯಕ್ತವಾಗಿತ್ತು. ಒಂದು ತಿಂಗಳು ಕಳೆಯುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಮೇಲ್ನೋಟಕ್ಕೆ ಅಪಘಾತದಿಂದ ಸಾವನ್ನಪ್ಪಿದಂತೆ ಕಂಡು ಬರುತ್ತಿದೆ ಎನ್ನಲಾಗಿದೆ.

ಆದರೆ, ಮನೆಯವರ ವಿರೋಧವೇ ಈ ಸಾವಿಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಅಮೀನಘಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ರಾಜ್ಯ ಬಿಜೆಪಿ ನಾಯಕರಿಗೆ ಶಾಕ್ ಮೂಡಿಸಿದ ಹೈಕಮಾಂಡ್ ತಂತ್ರ!