5 ವರ್ಷದ ಬಾಲಕಿಗೆ ಅತ್ಯಾಚಾರ ಮಾಡಿದ್ದ 70 ವರ್ಷದ ಮುದುಕನಿಗೆ ಕಠಿಣ ಶಿಕ್ಷೆ

Webdunia
ಗುರುವಾರ, 5 ಡಿಸೆಂಬರ್ 2019 (21:26 IST)
ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಧಾರವಾಡದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಧಾರವಾಡದ ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದಲ್ಲಿ 69 ವರ್ಷದ ಮೋಹನ ಮಾಕನ್ನವರ ಎಂಬಾತ 2018 ರ ಡಿ. 29 ರಂದು ಗ್ರಾಮದ 5 ವರ್ಷದ ಬಾಲಕಿಯನ್ನು ಗ್ರಾಮದ ಕರಿಯಮ್ಮ ದೇವಿ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ.

ಈ ಕುರಿತು ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಮಾಡಿದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ಮಾಡಿದ ಧಾರವಾಡದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಂ. ಗಂಗಾಧರ ಅವರು, ಆರೋಪಿ ವಿರುದ್ಧದ ಆರೋಪಗಳು ಸಾಬೀತು ಆದ ಹಿನ್ನೆಲೆಯಲ್ಲಿ ಅಪರಾಧಿ ಮೋಹನಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದರು.

ಅಲ್ಲದೇ ದಂಡದ ಮೊತ್ತವನ್ನು ಸಂತ್ರಸ್ತ ಬಾಲಕಿ ಕುಟುಂಬಕ್ಕೆ ನೀಡುವಂತೆ ಆದೇಶ ಹೊರಡಿಸಿದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕೋಳಿ ಅಂಕ ವಿಚಾರ, ನನ್ನ ಹೆಸರಿನಲ್ಲಿ ಅಪಪ್ರಚಾರ

ಮಹಾರಾಷ್ಟ್ರ: ಮಾರ್ಗ ಕಡಿತದಿಂದ 6ಕಿಮಿ ನಡೆದು ಆಸ್ಪತ್ರೆ ಸೇರಿದ ಗರ್ಭಿಣಿ ಸಾವು

ಸಿದ್ದರಾಮಯ್ಯ ಚಾಲನೆ ನೀಡಿದ ಅಂಬಾದೇವಿ ಮಹಾರಥೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗಿ

ಜನಾರ್ಧನ ರೆಡ್ಡಿ ಮೇಲೆ ಕೇಸ್ ಆಗಿದೆ ಭರತ್ ರೆಡ್ಡಿ ಮೇಲೆ ಯಾಕಿಲ್ಲ: ಎನ್ ರವಿಕುಮಾರ್

ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆ ಆತಂಕಕಾರಿಯಾಗಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments