ಬಾಗಲಕೋಟೆ: ಕೊರಿಯರ್‌ನಲ್ಲಿ ಬಂದ ಹೇರ್ ಡ್ರೈಯರ್ ಉಪಕರಣ ಬ್ಲಾಸ್ಟ್ ಆಗಿ ಮೃತ ಯೋಧನ ಪತ್ನಿಯ ಎರಡು ಕೈಗಳು ಛಿದ್ರಗೊಂಡ ಘಟನೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
 
									
			
			 
 			
 
 			
					
			        							
								
																	ಶಶಿಕಲಾ ಎಂಬುವರ ಹೆಸರು, ನಂಬರ್ ಹೊಂದಿದ್ದ ಪಾರ್ಸಲ್ ಕೊರಿಯರ್‌ಯೊಂದು ಬಂದಿತ್ತು. ಶಶಿಕಲಾ ಅವರು ಮೃತ ಯೋಧನ ಪತ್ನಿಯಾಗಿದ್ದರು. ಕೊರಿಯರ್‌ನವರು ಶಶಿಕಲಾ ಅವರಿಗೆ ಕರೆ ಮಾಡಿದ್ದರು. ಆದರೆ, ಅವರು ಊರಲ್ಲಿ ಇರದ ಕಾರಣ ಬಸಮ್ಮನಿಗೆ ಕೊರಿಯರ್ ಅನ್ನು ಪಡೆದು ತೆಗೆದು ನೋಡಲು ತಿಳಿಸಿದ್ದರು.
									
										
								
																	ನಂತರ ಕೊರಿಯರ್ ತೆಗೆದು ನೋಡಿದಾಗ ಹೇರ್ ಡ್ರೈಯರ್ ಇತ್ತು. ಈ ವೇಳೆ ಪಕ್ಕದ ಮನೆಯವರು ಹೇರ್ ಡ್ರೈಯರ್ ಆನ್ ಮಾಡಲು ತಿಳಿಸಿದ್ದಾರೆ. ಸ್ವಿಚ್ ಹಾಕಿ ಆನ್ ಮಾಡಿದ್ದೇ ತಡ ಬ್ಲಾಸ್ಟ್ ಆಗಿ ಜೋರಾಗಿ ಸದ್ದಾಯಿತು.
									
											
									
			        							
								
																	ಬ್ಲಾಸ್ಟ್ ಆದ ಹಿನ್ನೆಲೆ ಎರಡೂ ಕೈಗಳು ತುಂಡಾಗಿದ್ದು, ಬೆರಳುಗಳು ಛಿದ್ರ ಛಿದ್ರವಾಗಿ ತುಂಡಾಗಿದೆ. ಮನೆಯಲ್ಲಿ ರಕ್ತ ಚಿಮ್ಮಿದ್ದು, ಬಸಮ್ಮನನ್ನು ಇಳಕಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
									
			                     
							
							
			        							
								
																	ಶಶಿಕಲಾ ಅವರನ್ನು ವಿಚಾರಿಸಿದಾಗ ನಾನು ಹೇರ್ ಡ್ರೈಯರ್ ಆರ್ಡರ್ ಮಾಡೇ ಇಲ್ಲ. ಆದರೆ, ನನ್ನ ಹೆಸರಲ್ಲಿ ಹೇರ್ ಡ್ರೈಯರ್ ಬಂದಿದೆ. ಆರ್ಡರ್ ಮಾಡಿದವರು ಯಾರು? ಎಲ್ಲಿಂದ ಹೇರ್ ಡ್ರೈಯರ್ ಬಂತು ಎಂದು ಪೊಲೀಸರಿಂದ ತನಿಖೆ ನಡೆದಿದೆ.
									
			                     
							
							
			        							
								
																	ಸದ್ಯ ಹೇರ್ ಡ್ರೈಯರ್ ವಿಶಾಖಪಟ್ಟಣದಲ್ಲಿ ಉತ್ಪಾದನೆಯಾಗಿದ್ದು, ಕೊರಿಯರ್ ಬಾಗಲಕೋಟೆಯಿಂದ ಬಂದಿದೆ ಎಂದು ತಿಳಿದು ಬಂದಿದೆ.