Daily Horoscope
✕

ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಗೆ ಮತ್ತೆ ಸಂಕಷ್ಟ

Webdunia
ಬುಧವಾರ, 13 ಸೆಪ್ಟಂಬರ್ 2017 (13:58 IST)
ಮೈಸೂರು: ಮರಳು ಸಾಗಾಣಿಕೆಗೆ ಅಕ್ರಮ‌‌ ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. 

ಅಕ್ರಮ ಮರಳುಗಾರಿಕೆಗೆ ಪರವಾನಗಿ ನೀಡಲು ಲಂಚ ಪಡೆಯುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗೆ ಪ್ರೇರೇಪಣೆ ನೀಡಿದ ಪ್ರಕರಣದಲ್ಲಿ ಸಾಕಷ್ಟು ಸಾಕ್ಷ್ಯಾಧಾರಗಳು ದೊರೆತಿವೆ. ಈ ಹಿನ್ನೆಲೆಯಲ್ಲಿ ಸುನೀಲ್ ಬೋಸ್ ಆರೋಪಿ ಎಂದು ಪರಿಗಣಿಸಿ ಮೈಸೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ. 

ರಾಜು ಈ ಪ್ರಕರಣದಲ್ಲಿ 2ನೇ ಆರೋಪಿಯಾಗಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಅಲ್ಫೋನ್ಸಿಸ್ ಗೆ ಮರಳು ಗುತ್ತಿಗೆದಾರನಿಂದ ಲಂಚ ಪಡೆಯುವಂತೆ ಸುನೀಲ್ ಬೋಸ್ ಒತ್ತಡ ಒತ್ತಡ ಹಾಕಿದ್ದರು. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ತಪ್ಪೊಪ್ಪಿಕೊಂಡು ಸುನಿಲ್ ಬೋಸ್ ವಿರುದ್ಧ ಅಲ್ಫೋನ್ಸಿಸ್ ಲಿಖಿತ ದೂರು ದಾಖಲಿಸಿದ್ದರು. ಈ ಸಂಬಂ‍ಧ ಸುನೀಲ್ ಬೋಸ್ ಕೋರ್ಟ್ ಗೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಕೋರ್ಟ್ ಆದೇಶಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಚಳಿ ಇಂದು ಹೆಚ್ಚಿರುತ್ತಾ, ಈ ಜಿಲ್ಲೆಯವರು ತಪ್ಪದೇ ಗಮನಿಸಿ

ನನಗೆ ಭಾರತ ಎಲ್ಲಿದೆ ಅಂತಾನೇ ಗೊತ್ತಿರಲಿಲ್ಲ: ಸೋನಿಯಾ ಗಾಂಧಿ

ಬೆಳಗಾವಿ ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿದ್ದೇವೆ: ಛಲವಾದಿ ನಾರಾಯಣಸ್ವಾಮಿ

ಬೆಲೆ ಏರಿಕೆ ವಿರುದ್ಧ 3 ದಿನ ಪ್ರತಿಭಟನೆ

ಸಫಾರಿ ಮೋಜಿಗಾಗಿ ಬೈಕ್ ನಲ್ಲಿ ಸಿಂಹಗಳನ್ನೇ ಬೆನ್ನಟ್ಟಿದ್ರು: ನೆಟ್ಟಿಗರ ಭಾರೀ ಆಕ್ರೋಶ Video

ಮುಂದಿನ ಸುದ್ದಿ
Show comments