ಬೆಂಗಳೂರು : ಕಾಪಿರೈಟ್ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡುವಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಟ್ವಿಟ್ಟರ್ ಕಂಪನಿಗೆ ಆದೇಶ ನೀಡಿದೆ.
ಭಾರತ್ ಜೋಡೋ ಯಾತ್ರೆಯ ಪ್ರಚಾರದಲ್ಲಿ ಕೆಜಿಎಫ್ ಚಾಪ್ಟರ್-2 ಸಿನಿಮಾದ ಆಡಿಯೋವನ್ನು ಬಳಸಲಾಗಿದೆ ಎಂದು ಆರೋಪಿಸಿ ಎಂಆರ್ಟಿ ಸ್ಟುಡಿಯೋಕೋರ್ಟ್ ಮೊರೆ ಹೋಗಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಕಾಂಗ್ರೆಸ್ ಮತ್ತು ಭಾರತ್ ಜೋಡೋ ಯಾತ್ರೆಯ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡುವಂತೆ ಆದೇಶಿಸಿದೆ.