Select Your Language

Notifications

webdunia
webdunia
webdunia
webdunia

ಜಯಲಲಿತಾ ಆಸ್ತಿ ಹರಾಜಿಗೆ ಕೋರ್ಟ್ ಅನುಮತಿ

ಜಯಲಲಿತಾ ಆಸ್ತಿ ಹರಾಜಿಗೆ ಕೋರ್ಟ್ ಅನುಮತಿ
ಬೆಂಗಳೂರು , ಗುರುವಾರ, 26 ಜನವರಿ 2023 (13:05 IST)
ಬೆಂಗಳೂರು : ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಲಲಿತಾ ಅವರಿಗೆ ಸಂಬಂಧಿಸಿದ ಕೆಲ ಆಸ್ತಿಯನ್ನು ಹರಾಜು ಹಾಕಲು ಕೋರ್ಟ್ ಅನುಮತಿ ನೀಡಿದೆ.

 
ಜಯಲಲಿತಾ ಅವರು ನಿಧನರಾದ ಹಿನ್ನೆಲೆಯಲ್ಲಿ ಆ ಆಸ್ತಿಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಡುವಂತೆ ಆರ್ಟಿಐ ಕಾರ್ಯಕರ್ತ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರಿಗೆ ಮನವಿ ಸಲ್ಲಿಸಿದ್ದರು. 

ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ ವಶಪಡಿಸಿಕೊಂಡ ವಸ್ತುಗಳನ್ನು ಮಾರಾಟ ಮಾಡಲು ಸೂಕ್ತವಾದ ಅಧಿಕಾರಿಯನ್ನು ನೇಮಿಸುವಂತೆ ಜೊತೆಗೆ ಬಂದ ಹಣದಲ್ಲಿ ಕರ್ನಾಟಕ ಸರ್ಕಾರ ಖರ್ಚು ಮಾಡಿದ್ದ 5 ಕೋಟಿಯನ್ನು ತನ್ನಲ್ಲೇ ಇಟ್ಟುಕೊಂಡು ಉಳಿದ ಬಾಕಿ ಹಣವನ್ನು ತಮಿಳುನಾಡಿನ ಸರ್ಕಾರಕ್ಕೆ ನೀಡುವಂತೆ ಸೂಚನೆ ನೀಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಟ್ರಂಪ್ ಫೇಸ್ಬುಕ್, ಇನ್ಸ್ಟಾಗ್ರಾಂ ಖಾತೆ ಮರುಸ್ಥಾಪನೆ