ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ.ಮರಿಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಜಿಲ್ಲಾಧಿಕಾರಿ ಅವರಿಗೆ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಕೆ.ಮರಿಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮೈಸೂರು 3 ನೇಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ತಹಶೀಲ್ದಾರ್ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಕೆ.ಮರಿಗೌಡ ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿದ್ದರು. ಈ ಕುರಿತು ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಮರಿಗೌಡ ತಲೆ ಮರೆಸಿಕೊಂಡಿದ್ದ.
ಅಗಸ್ಟ್ 6 ರಂದು ಕೆ.ಮರಿಗೌಡ ನಜರ್‌ಬಾದ್ ಪೊಲೀಸ್ ಠಾಣೆಗೆ ಶರಣಾಗಿದ್ದು, ಜಾಮೀನು ನೀಡುವಂತೆ ಕೋರಿ ಕೋರ್ಟ್ ಮೊರೆ ಹೋಗಿದ್ದರು. ಆದರೆ, ಮೈಸೂರು 3 ನೇಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ಇಂದು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಮರಿಗೌಡ ಜೈಲುವಾಸ ಮುಂದುವರೆಯಲಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ