Webdunia - Bharat's app for daily news and videos

Install App

ಮರಿಗೌಡ ಜಾಮೀನು ಅರ್ಜಿ ವಜಾ: ಜೈಲೇ ಗತಿ

Webdunia
ಸೋಮವಾರ, 8 ಆಗಸ್ಟ್ 2016 (17:37 IST)
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ.ಮರಿಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
 
ಜಿಲ್ಲಾಧಿಕಾರಿ ಅವರಿಗೆ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಕೆ.ಮರಿಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮೈಸೂರು 3 ನೇಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
 
ತಹಶೀಲ್ದಾರ್ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಕೆ.ಮರಿಗೌಡ ಮೈಸೂರು ಜಿಲ್ಲಾಧಿಕಾರಿ ಶಿಖಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿದ್ದರು. ಈ ಕುರಿತು ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಮರಿಗೌಡ ತಲೆ ಮರೆಸಿಕೊಂಡಿದ್ದ.
 
ಅಗಸ್ಟ್ 6 ರಂದು ಕೆ.ಮರಿಗೌಡ ನಜರ್‌ಬಾದ್ ಪೊಲೀಸ್ ಠಾಣೆಗೆ ಶರಣಾಗಿದ್ದು, ಜಾಮೀನು ನೀಡುವಂತೆ ಕೋರಿ ಕೋರ್ಟ್ ಮೊರೆ ಹೋಗಿದ್ದರು. ಆದರೆ, ಮೈಸೂರು 3 ನೇಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ಇಂದು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಮರಿಗೌಡ ಜೈಲುವಾಸ ಮುಂದುವರೆಯಲಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments