ಆನ್ ಲೈನ್ ಜೂಜಾಟ ನಿಷೇಧ ತೀರ್ಪು ಎತ್ತಿಹಿಡಿದ ಕೋರ್ಟ್

ಆನ್ ಲೈನ್
ರಾಜ್ಯದಲ್ಲಿ ಎಲ್ಲಾ ಬಗೆಯ ಆನ್ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್ ನಿಷೇಧಿಸುವ ಸಲುವಾಗಿ ಕರ್ನಾಟಕ ಪೊಲೀಸ್ ಕಾಯಿದೆಗೆ ತಿದ್ದುಪಡಿ ತರಲಾಗಿದೆ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್ಗೆ ಮಾಹಿತಿ ನೀಡಿದೆ. ಆನ್ಲೈನ್ ಜೂಜಿನಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ.
 
ಅವುಗಳನ್ನು ನಿಷೇಧಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ದಾವಣಗೆರೆಯ ಡಿ.ಆರ್. ಶಾರದಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ನೇತೃತ್ವದ ವಿಭಾಗೀಯ ಪೀಠ ನಡೆಸಿತು. ಸರ್ಕಾರದ ಪರ ವಕೀಲರು ರಾಜ್ಯದಲ್ಲಿ ಎಲ್ಲಾ ರೀತಿಯ ಆನ್ಲೈನ್ ಗ್ಯಾಂಬ್ಲಿಂಗ್ ಹಾಗೂ ಬೆಟ್ಟಿಂಗ್ ನಿಷೇಧಿಸುವ ಸಲುವಾಗಿ ಕರ್ನಾಟಕ ಪೊಲೀಸ್ ಕಾಯಿದೆ ಜಾರಿಗೆ ತರಲಾಗಿದೆ. ಅರ್ಜಿದಾರರ ಮನವಿ ಈಡೇರಿರುವುದರಿಂದ ಅರ್ಜಿಯು ವಿಚಾರಣಾ ಮಾನ್ಯತೆ ಕಳೆದುಕೊಂಡಿದೆ ಎಂದು ಪೀಠಕ್ಕೆ ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸೌಂದರ್ಯ ಜಗದೀಶ್ ಕುಟುಂಬದ ಪುಂಡಾಟ