Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಮೇಲೆ ಕೋರ್ಟ್ ಗರಂ..!!!

ಬಿಬಿಎಂಪಿ ಮೇಲೆ ಕೋರ್ಟ್ ಗರಂ..!!!
ಬೆಂಗಳೂರು , ಬುಧವಾರ, 27 ಅಕ್ಟೋಬರ್ 2021 (18:16 IST)
ಹೈಕೋರ್ಟ್‌ ಆದೇಶಗಳನ್ನು ಬಿಬಿಎಂಪಿ ಪಾಲಿಸುತ್ತಿಲ್ಲ ಏಕೆ? ಎಂದು ಪ್ರಶ್ನಿಸಿದ ನ್ಯಾಯಮೂರ್ತಿಗಳು, ಹಲವು ಪ್ರಕರಣಗಳಲ್ಲಿ ಈ ಅಂಶ ನಮ್ಮ ಗಮನಕ್ಕೆ ಬಂದಿದೆ‌. ಈವರೆಗೆ ಎಷ್ಟು ಅಕ್ರಮ ಕಟ್ಟಡ ನೆಲಸಮ ಮಾಡಿದ್ದೀರಿ ಎಂದು ಪ್ರಶ್ನಿಸಿದರು.
 
ಬಿಬಿಎಂಪಿ ಪರ ಹೈಕೋರ್ಟ್​ನಲ್ಲಿ ಹಾಜರಿದ್ದ ವಕೀಲ ನಂಜುಂಡರೆಡ್ಡಿ ವಾದ ಮಂಡಿಸಿ, 2020ರ ನಂತರ ನಿರ್ಮಾಣವಾದ 5,905 ಕಟ್ಟಡಗಳ ಸಮೀಕ್ಷೆ ಮಾಡಲಾಗಿದೆ. ಈ ಪೈಕಿ 4,279 ಕಟ್ಟಡಗಳು ನಕ್ಷೆ ಉಲ್ಲಂಘಿಸಿ ನಿರ್ಮಾಣವಾಗಿವೆ. ಈ ಕಟ್ಟಡಗಳಿಗೆ ನೋಟಿಸ್ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ಇನ್ನೂ 2,591 ಕಟ್ಟಡಗಳ ಸರ್ವೆ ಬಾಕಿಯಿದೆ. ನಕ್ಷೆಯಿಲ್ಲದೆ ನಿರ್ಮಾಣವಾದ ಕಟ್ಟಡಗಳ ಸರ್ವೆ ಆರಂಭವಾಗಿಲ್ಲ. ಅಕ್ರಮ ಸಕ್ರಮ ಕಾಯ್ದೆ ಸುಪ್ರೀಂಕೋರ್ಟ್‌ನಲ್ಲಿ ಬಾಕಿಯಿವೆ ಎಂದು ವಿವರಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಾಂಗ್ಲಾದೇಶ ಹಿಂಸೆ ಖಂಡಿಸಿ ಮುಸಲ್ಮಾನರ ಪ್ರತಿಭಟನೆ