Select Your Language

Notifications

webdunia
webdunia
webdunia
webdunia

Covid 19: ರಾಜ್ಯದಲ್ಲಿ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ ಬೆಳಗಾವಿಯಲ್ಲಿ ವೃದ್ಧ ಕೊರೊನಾಗೆ ಬಲಿ

ಕೋವಿಡ್ 19

Sampriya

ಬೆಳಗಾವಿ , ಗುರುವಾರ, 29 ಮೇ 2025 (16:03 IST)
ಬೆಳಗಾವಿ: ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದ ವೃದ್ಧರೊಬ್ಬರು ಶಂಕಿತ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಬುಧವಾರ ರಾತ್ರಿ ಜಿಲ್ಲಾಸ್ಪತ್ರೆಯಲ್ಲಿ 70 ವರ್ಷದ ವೃದ್ಧ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು.

ಮೂರು ದಿನಗಳ ಹಿಂದೆ ಅವರನ್ನು ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆಗೆ ದಾಖಲಾಗುವ ವೇಳೆ ಅಧಿಕ ರಕ್ತದೊತ್ತಡ, ಮಧುಮೇಹ, ಕಿಡ್ನಿ ಸಮಸ್ಯೆ, ಮಿದುಳು ಸಂಬಂಧಿ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು.

ಕೊರೊನಾದ ಲಕ್ಷಣಗಳು ಕಂಡುಬಂದ ಕಾರಣ ಅವರನ್ನು ಬುಧವಾರ ಜಿಲ್ಲಾಸ್ಪತ್ರೆಯ ವಿಶೇಷ ವಾರ್ಡಿಗೆ ಸ್ಥಳಾಂತರಿಸಲಾಗಿತ್ತು. ‌ನಿನ್ನೆ ಕೊರೊನಾ ಟೆಸ್ಟ್‌ ಮಾಡಿಸಿದ ವೇಳೆ ಪಾಸಿಟಿವ್ ಕಂಡುಬಂದಿತ್ತು.


Share this Story:

Follow Webdunia kannada

ಮುಂದಿನ ಸುದ್ದಿ

Karnataka:ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ಸರ್ಕಾರಕ್ಕೆ ಛಾಟಿಯೇಟು ಕೊಟ್ಟ ಹೈಕೋರ್ಟ್ ತೀರ್ಪು