Select Your Language

Notifications

webdunia
webdunia
webdunia
Thursday, 10 April 2025
webdunia

ಬೆಂಗಳೂರಲ್ಲಿ ಕೋವಿಡ್ ಕೇಸ್ ಹೆಚ್ಚಾದರೂ ಆಸ್ಪತ್ರೆಗಳಿಗೆ ಬಿದ್ದಿಲ್ಲ ಒತ್ತಡ

Covid case
bangalore , ಗುರುವಾರ, 20 ಜನವರಿ 2022 (19:41 IST)
ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದರೂ ಆಸ್ಪತ್ರೆಗಳಿಗೆ ಒತ್ತಡ ಬಿದ್ದಿಲ್ಲ.
ರಾಜ್ಯದಲ್ಲಿ ಸೋಮವಾರ ಕೋವಿಡ್-19 ಆಸ್ಪತ್ರೆಗಳ ಬೆಡ್‌ಗಳಲ್ಲಿ ಶೇ.3ರಷ್ಟು ರೋಗಿಗಳು ದಾಖಲಾಗಿದ್ದಾರೆ.
ಮಂಗಳವಾರ ರಾಜ್ಯಾದ್ಯಂತ 41,೦೦೦ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಕೋವಿಡ್ ಆಸ್ಪತ್ರೆಗಳಲ್ಲಿ ದಾಖಲಾದ ಸೋಂಕಿತರ ಸಂಖ್ಯೆ ಶೇ5.3ರಷ್ಟು ಹೆಚ್ಚಾಗಿದೆ.
ಸೋಮವಾರ 2,548  ಸೋಂಕಿತರು ದಾಖಲಾಗಿದ್ದರೆ, ಮಂಗಳವಾರ ಈ ಸಂಖ್ಯೆ 4,795ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿ ಅಂಶಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಅತಿ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಬಿಎಂಪಿ ಮಾಹಿತಿ ಅನ್ವಯ 628 ರೋಗಿಗಳು ಪ್ರಸ್ತುತ ಆಸ್ಪತ್ರೆಯಲ್ಲಿದ್ದಾರೆ. ರಾಜ್ಯದ ಆಸ್ಪತ್ರೆಗಳಲ್ಲಿ ಒಟ್ಟು 1.9 ಲಕ್ಷ ಬೆಡ್‌ಗಳು ಲಭ್ಯವಿದೆ. ಇದರಲ್ಲಿ 90  ಸಾವಿರ ಬೆಡ್‌ಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆ