ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮಹಾಮಾರಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ದೆಹಲಿ, ಹರ್ಯಾಣ ಬಳಿಕ ಕರ್ನಾಟಕದಲ್ಲೂ ಕೆಲವು ನಿಯಮಾವಳಿ ಮಾಡಲಾಗಿದೆ.
ಇಂದು ಕೊವಿಡ್ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 35 ಸಕ್ರಿಯ ಕೇಸ್ ಗಳಿದ್ದು ಅದರಲ್ಲೂ ಬೆಂಗಳೂರಿನಲ್ಲೇ 32 ಪ್ರಕರಣಗಳಿವೆ ಎಂದು ಸಚಿವರು ಹೇಳಿದ್ದಾರೆ.
ಕೊರೋನಾ ಸಂಖ್ಯೆ ಹೆಚ್ಚಳ ಹಿನ್ನಲೆಯಲ್ಲಿ ಎಲ್ಲಾ ಆಸ್ಪತ್ರೆಗಳಿಗೆ ತಕ್ಕ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಒಂದು ತಿಂಗಳಿಗಾಗುವಷ್ಟು ಕೊರೋನಾ ಟೆಸ್ಟ್ ಕಿಟ್ ತೆಗೆದಿಡುವಂತೆ ಸೂಚನೆ ನೀಡಲಾಗಿದೆ. ಹೃದ್ರೋಗಿಗಳು, ಉಸಿರಾಟ ಸಂಬಂಧೀ ಆರೋಗ್ಯ ಸಮಸ್ಯೆಯಿರುವವರು ತಪ್ಪದೇ ಟೆಸ್ಟ್ ಮಾಡಿಸಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ.
ಕೊವಿಡ್ ಗೆ ಭಯಪಡಬೇಕಾಗಿಲ್ಲ. ಆದರೆ ಎಚ್ಚರಿಕೆ ಅಗತ್ಯ. ಜನಸಂದಣಿ ಇರುವ ಕಡೆ ಮಾಸ್ಕ್ ಧರಿಸಿ ಓಡಾಡಬೇಕು. ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸಿ ಎಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಸಾಕು ಎಂದು ಸಚಿವರು ಹೇಳಿದ್ದಾರೆ.