Publish Date: Thu, 29 Dec 2022 (16:42 IST)
Updated Date: Thu, 29 Dec 2022 (16:46 IST)
ಬೆಂಗಳೂರಿಗೆ ಮತ್ತೆ ಕೊರೋನಾ ಆತಂಕ ಎದುರಾಗಿದ್ದು, ವಿದೇಶದಿಂದ ಬರುವ ಪ್ರಯಾಣಿಕರು ಕೊರೋನಾವನ್ನು ಹೊತ್ತು ತರುವ ಸಾಧ್ಯತೆ ಹೆಚ್ಚಿದೆ. ವಿದೇಶದಿಂದ ಬೆಂಗಳೂರಿಗೆ ಬಂದ 3 ಮಂದಿ ಪ್ರಯಾಣಿಕರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಜನವರಿ ಮಧ್ಯಭಾಗದ ವೇಳೆಗೆ ಕೊರೋನಾ 4ನೇ ಅಲೆ ಬರುವ ಸಾಧ್ಯತೆ ಇದೆ. ಈಗಾಗಲೇ ಚೀನಾ ಸೇರಿದಂತೆ ಇತರೆ ರಾಷ್ಟ್ರಗಳಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ದೇಶದಿಂದ ಭಾರತಕ್ಕೂ ಜನರು ಭೇಟಿ ನೀಡಬಹುದು, ಅದರಿಂದ ದೇಶದಲ್ಲಿ ಕೊರೋನಾ ಪ್ರಕರಣಗಳು ಮತ್ತಷ್ಟು ಹೆಚ್ಚಾಗಬಹುದು ಎನ್ನುವ ಆತಂಕ ಮನೆಮಾಡಿದೆ. ಹೀಗಾಗಿ ಕೊರೋನಾ ಸೋಂಕು ಹೆಚ್ಚಿರುವ ದೇಶಗಳ ಪ್ರಯಾಣಿಕರಿಗೆ ಕಡ್ಡಾಯ ಕೊವಿಡ್ ಟೆಸ್ಟ್ ಮಾಡಬೇಕು ಎಂದು ತಜ್ಞರು ಹೇಳುತ್ತಿದ್ದಾರೆ. ಸದ್ಯಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಶೇ. 2ರಷ್ಟು ಪ್ರಯಾಣಿಕರಿಗೆ ಕೊವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಶೇ. 2ರಷ್ಟು ರ್ಯಾಂಡಮ್ ಕೊವಿಡ್ ಪರೀಕ್ಷೆಯನ್ನ ಕನಿಷ್ಠ 10%ಗೆ ಹೆಚ್ಚಿಸುವಂತೆ ಮನವಿ ಮಾಡಲಾಗುತ್ತಿದೆ.