ಬೆಂಗಳೂರು(ಆ.17): ದೇಶದಲ್ಲಿ ವಿನೂತನ ಪ್ರಯತ್ನವನ್ನು ಕರ್ನಾಟಕ ಸರ್ಕಾರ ಮಾಡುತ್ತಿದೆ. ಸಕ್ರಿಯವಾಗಿರೋ ಕ್ಷಯ ರೋಗ ಪತ್ತೆ ಮಾಡುವುದು. ಕೋವಿಡ್ ಬಂದವರಿಂದ ಅದನ್ನು ಪತ್ತೆ ಹಚ್ಚಬೇಕಿದೆ. ಇದೇ 14ರಿಂದ 30ರವರೆಗೂ ನಡೆಯಲಿದೆ. 28 ಲಕ್ಷ ಜನ ಗುಣಮುಖರಾಗಿದ್ದಾರೆ.
ಕೋವಿಡ್ನಲ್ಲಿ ಕಪ್ಪು ಶಿಲೀಂಧ್ರಗಳ ಪತ್ತೆ ಮಾಡುವ ತಪಾಸಣೆ ನಡೆಯುತ್ತಿದೆ. ಅದೇ ಮಾದರಿಯಲ್ಲಿ ಕ್ಷಯ ರೋಗ ಪತ್ತೆ ಮಾಡಲಾಗುವುದು. ಶ್ವಾಸಕೋಶ ಸೋಂಕಿನಿಂದ ಬರುವುದು ಕ್ಷಯ ರೋಗ. ಹಾಗಾಗಿ ಯಾರೆಲ್ಲಾ ಗುಣಮುಖರಾಗಿದ್ದಾರೆ ಅವರಿಗೆ ದೊಡ್ಡ ಮಟ್ಟದಲ್ಲಿ ವ್ಯಾಪಿಸದ ರೀತಿಯಲ್ಲಿ ಅವರ ಅಭಿಪ್ರಾಯದಂತೆ ಆಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಕಳೆದ ಐದು ವರ್ಷದಿಂದ ಕ್ಷಯ ರೋಗ ಹೆಚ್ಚಾಗಿದೆ. ಶೇ.33ರಷ್ಟು ಕ್ಷಯ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಇಲ್ಲಿಯವರೆಗೂ ನಾವು ಯಾವ್ಯಾವ ವೃತ್ತಿಯಲ್ಲಿ ಹೆಚ್ಚು ಬರಲಿದೆ ಅಂತ ತಪಾಸಣೆ ಮಾಡಿದ್ದೇವೆ. ಆರ್ಥಿಕ ಸ್ಥಿತಿಗತಿಗಳ ಪ್ರಕಾರವೂ ಸರ್ವೇ ಮಾಡಲಾಗಿದ್ದು, ತಪಾಸಣೆ ಮಾಡಲಾಗಿದೆ. ಇದರ ಜೊತೆಯಲ್ಲಿ ಕೋವಿಡ್ ಬಂದವರಲ್ಲೂ ತಪಾಸಣೆ ಮಾಡಲಾಗ್ತಿದೆ. ಕರ್ನಾಟಕದಲ್ಲಿ ಮೊದಲ ಬಾರಿಗೆ ಇದನ್ನ ಮಾಡಲಾಗ್ತಿದೆ.