Publish Date: Sun, 19 Jun 2022 (10:36 IST)
Updated Date: Sun, 19 Jun 2022 (10:24 IST)
ಬೆಂಗಳೂರು : ನಾಳೆ ಮೋದಿ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದಾರೆ.
ಪಿಎಂ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಆಗಿರಬೇಕು ಎಂದು ಪೊಲೀಸ್ ಇಲಾಖೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿಎಂ ಅವರ ಆರ್.ಟಿ. ನಗರ ನಿವಾಸಕ್ಕೆ ಆಗಮಿಸಿದ ಆರೋಗ್ಯ ಸಿಬ್ಬಂದಿ ಬಂದು ಮನೆಯಲ್ಲೇ ಕೋವಿಡ್ ಪರೀಕ್ಷೆ ಮಾಡಿದ್ದಾರೆ. ಮೋದಿ ಕಾರ್ಯಕ್ರಮಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯ ಹಿನ್ನೆಲೆ ಮೋದಿ ಕಾರ್ಯಕ್ರಮದ ಬಂದೋಬಸ್ತ್ನಲ್ಲಿ ಭಾಗಿಯಾಗಿರುವ 500 ಪೊಲೀಸರು ಕೋವಿಡ್ ಟೆಸ್ಟ್ಗೆ ಒಳಗಾಗಿದ್ದಾರೆ.
ಬಿಬಿಎಂಪಿ ಆರೋಗ್ಯ ಸಿಬ್ಬಂದಿ ನಿನ್ನೆ ಪ್ಯಾಲೇಸ್ ಗ್ರೌಂಡ್ನಲ್ಲಿ ಪೊಲೀಸರನ್ನು ಕೋವಿಡ್ ಟೆಸ್ಟ್ ಮಾಡಿದ್ದು, ಇಂದು ರಿಪೋರ್ಟ್ ಹೊರಬೀಳಲಿದೆ.