Webdunia - Bharat's app for daily news and videos

Install App

COVID19: ಲಾಕ್ ಡೌನ್ ಬರುತ್ತಾ, ಶಾಲೆಗೆ ರಜೆ ಇರುತ್ತಾ: ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಏನಾಯ್ತು

Krishnaveni K
ಸೋಮವಾರ, 26 ಮೇ 2025 (20:26 IST)
ಬೆಂಗಳೂರು: ಕೊವಿಡ್ ಮಹಾಮಾರಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮತ್ತು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಏನೇನು ತೀರ್ಮಾನವಾಗಿದೆ ಇಲ್ಲಿದೆ ನೋಡಿ ವಿವರ.

ಇಂದಿನ ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳುವ ಕ್ರಮಗಳ ಬಗ್ಗೆ ನಿಯಮಿತವಾಗಿ ತಮಗೆ ಮಾಹಿತಿ ನೀಡುವಂತೆಯೂ ತಿಳಿಸಿದ್ದಾರೆ. ಪ್ರತೀ ವಾರ ಕೊವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸುವಂತೆ ಸೂಚನೆ ನೀಡಿದ್ದಾರೆ.

ಶಾಲೆ ಕಾಲೇಜಿಗೆ ರಜೆ ಇರುತ್ತಾ?
ಕೊವಿಡ್ ಹರಡುತ್ತಿದ್ದಂತೇ ಶಾಲೆ, ಕಾಲೇಜುಗಳಿಗೆ ರಜೆ ಇರುತ್ತಾ ಎಂದು ಬಹುತೇಕ ಪೋಷಕರು, ವಿದ್ಯಾರ್ಥಿಗಳಿಗೆ ಆತಂಕ ಶುರುವಾಗಿತ್ತು. ಆದರೆ ಸದ್ಯಕ್ಕೆ ಶಾಲೆ, ಕಾಲೇಜು ನಡೆಯಲಿದೆ. ಆದರೆ ನೆಗಡಿ, ಕೆಮ್ಮು ಇತ್ಯಾದಿ ಆರೋಗ್ಯ ಸಮಸ್ಯೆ ಇರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ರಜೆ ತೆಗೆದುಕೊಳ್ಳಲು ಸೂಚಿಸಲಾಗಿದೆ.

ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಹಾಗಿದ್ದರೂ ಮುಂಜಾಗ್ರತಾ ಕ್ರಮವಾಗಿ ಆಕ್ಸಿಜೆನ್, ವೆಂಟಿಲೇಟರ್ ಎಲ್ಲವನ್ನೂ ಸಿದ್ಧವಾಗಿರಿಸಿಕೊಳ್ಳಲು ಸೂಚಿಸಲಾಗಿದೆ. ಬಾಣಂತಿ, ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸಬೇಕು. ರಾಜ್ಯದಲ್ಲಿ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು.

ಮುಂದಿನ ದಿನಗಳಲ್ಲಿ ಅವಶ್ಯಕತೆ ಬಂದಲ್ಲಿ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಕೇಂದ್ರ ಸ್ಥಾಪಿಸಬೇಕು. ಆರೋಗ್ಯ ಸಿಬ್ಬಂದಿ ರಜೆ ಹಾಕದೇ ಕರ್ತವ್ಯಕ್ಕೆ ಹಾಜರಿರಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments