Publish Date: Fri, 09 Jul 2021 (13:30 IST)
Updated Date: Fri, 09 Jul 2021 (13:32 IST)
ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಸುಮಾರು 43 ಸಾವಿರ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 911 ಮಂದಿ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ 43,399 ಸೋಂಕು ಪ್ರಕರಣಗಳು ವರದಿಯಾಗಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 3,07,52,950ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 4,05,939ಕ್ಕೆ ಜಿಗಿತ ಕಂಡಿದೆ.
44,459 ಮಂದಿ ಒಂದೇ ದಿನದಲ್ಲಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 4,98,88,284ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4,58,727ಕ್ಕೆ ಇಳಿಕೆಯಾಗಿದೆ.