ರಾಜ್ಯದಲ್ಲಿ ಕಳೆದ ಒಂದು ದಿನದಲ್ಲಿ 1869 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 42 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡಗುಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 432 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 6 ಮಂದಿ ಅಸುನೀಗಿದ್ದಾರೆ.