Publish Date: Sat, 10 Jul 2021 (14:00 IST)
Updated Date: Sat, 10 Jul 2021 (14:02 IST)
ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಸುಮಾರು 42,766 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 1206 ಮಂದಿ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,07,95,716ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 4,07,145ಕ್ಕೆ ಜಿಗಿತ ಕಂಡಿದೆ.
44,254 ಮಂದಿ ಒಂದೇ ದಿನದಲ್ಲಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 4,99,33,548ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4,55,033ಕ್ಕೆ ಇಳಿಕೆಯಾಗಿದೆ.