Select Your Language

Notifications

webdunia
webdunia
webdunia
webdunia

"ಅಕ್ಟೋಬರ್ ಅಂತ್ಯದೊಳಗೆ ರಾಜ್ಯದಲ್ಲಿ ಎಲ್ಲರಿಗೂ ಕೋವಿಡ್ ಲಸಿಕೆ"

ಬೆಂಗಳೂರು , ಭಾನುವಾರ, 19 ಸೆಪ್ಟಂಬರ್ 2021 (13:29 IST)
ಬೆಂಗಳೂರು, ಸೆ.19 :  ಅಕ್ಟೋಬರ್ ಅಂತ್ಯದೊಳಗೆ ಎಲ್ಲರಿಗೂ ಕೋವಿಡ್ ಮೊದಲನೆ ಡೋಸ್ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ನಡೆದ ಮಹಾ ಲಸಿಕಾ ಅಭಿಯಾನದಲ್ಲಿ ರಾಜ್ಯದಲ್ಲಿ 31.60 ಲಕ್ಷ ಮಂದಿಗೆ ಲಸಿಕೆ ನೀಡಿ ದಾಖಲೆ ನಿರ್ಮಿಸಲಾಗಿದೆ.
10 ಲಕ್ಷ ಜನಸಂಖ್ಯೆಗೆ ಹೋಲಿಸಿದರೆ ದೇಶದಲ್ಲೇ ಅತಿ ಹೆಚ್ಚು ಲಸಿಕೆ ನೀಡಿದ ರಾಜ್ಯ ನಮ್ಮದಾಗಿದೆ. ಡಿ.15ರೊಳಗೆ ಎರಡು ಡೋಸ್ ಲಸಿಕೆಯನ್ನು ಎಲ್ಲರಿಗೂ ನೀಡುವ ಗುರಿ ಇದ್ದು, ವರ್ಷಾಂತ್ಯದೊಳಗೆ ಲಸಿಕೆ ನೀಡಿಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು.
ಕಾಂಗ್ರೆಸ್ಗೆ ಯಾವುದೇ ಬದ್ಧತೆ ಇಲ್ಲ. ಜನರ ಆರೋಗ್ಯದ ವಿಚಾರದಲ್ಲೂ ರಾಜಕಾರಣ ಮಾಡುವುದು ನೀಚತನ. ಲಸಿಕೆ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದರು ಎಂದು ಆರೋಪಿಸಿದರು.
ಋತುಮಾನ ಆಧಾರಿತ ಜ್ವರ ಕಾಣಿಸಿಕೊಂಡಿರುವುದನ್ನು ಸೂಕ್ಷ್ಮವಾಗಿ ಗಮನಿಸಿ ಮಕ್ಕಳಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಯಾವುದೇ ಆತಂಕ ಸದ್ಯಕ್ಕೆ ಸೃಷ್ಟಿಯಾಗಿಲ್ಲ. ಎಲ್ಲ ರೀತಿಯ ಚಟುವಟಿಕೆಗಳು ಪ್ರಾರಂಭವಾಗಿರುವುದರಿಂದ ಜ್ವರದ ಪ್ರಮಾಣ ಹೆಚ್ಚಾಗಿ ಕಂಡುಬರುತ್ತಿದೆ. ಮಕ್ಕಳಿಗೆ ಲಸಿಕೆ ಕಂಡುಹಿಡಿಯುವ ಸಂಶೋಧನೆಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಲಸಿಕೆ ಕೊಡುವ ಸಾಧ್ಯತೆಗಳಿವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ಸಂಜೆ 4ಕ್ಕೆ ಸಿಇಟಿ ಫಲಿತಾಂಶ ಪ್ರಕಟ