ಹಸುಳೆಯ ಅನಾರೋಗ್ಯ: ಎರಡೇ ಗಂಟೆಯಲ್ಲಿ ಉಚಿತ ಚಿಕಿತ್ಸೆ ವ್ಯವಸ್ಥೆ ಮಾಡಿದ ಸಿಎಂ ಬೊಮ್ಮಾಯಿ

Webdunia
ಮಂಗಳವಾರ, 21 ಜೂನ್ 2022 (20:34 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿನಲ್ಲಿ ಯೋಗ ದಿನಾಚರಣೆ ಮುಗಿಸಿ, ಬೆಂಗಳೂರಿನ ತಮ್ಮ ನಿವಾಸಕ್ಕೆ ಆಗಮಿಸಿದಾಗ, ಹಸುಗೂಸನ್ನು ಎತ್ತಿಕೊಂಡು ಕಾಯುತ್ತಿದ್ದ ಶಂಕ್ರಮ್ಮ ಅವರ ಗಮನ ಸೆಳೆದಳು.
 
ಆಕೆಯ ಸಮಸ್ಯೆಯ ಕುರಿತು ವಿಚಾರಿಸಿದಾಗ, ಶಂಕ್ರಮ್ಮನ ಮಗು ಕೃಷ್ಣವೇಣಿ, ದೃಷ್ಟಿ ದೋಷ ಹಾಗೂ ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ವೆಚ್ಚವಾಗುವುದು. ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದಳು.
 
ಶಂಕ್ರಮ್ಮನ ಮನವಿಗೆ ಕೂಡಲೇ ಸ್ಪಂದಿಸಿದ ಮುಖ್ಯಮಂತ್ರಿಗಳು ಮಗು ಕೃಷ್ಣವೇಣಿಯ ಚಿಕಿತ್ಸೆಗೆ ನೆರವು ನೀಡುವ ಭರವಸೆ ನೀಡಿದರು. ಇದಾಗಿ ಎರಡು ತಾಸಿನೊಳಗೆ ಮುಖ್ಯಮಂತ್ರಿ ಪರಿಹಾರ ನಿಧಿ ಶಾಖೆಯಿಂದ ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಗೆ ಪತ್ರ ಬರೆದು, ಕೃಷ್ಣವೇಣಿಯ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಯಿತು.
 
ಮಗುವಿಗೆ ಸಂಪೂರ್ಣವಾದ ಚಿಕಿತ್ಸೆ ನೀಡಿದ ನಂತರ ಸರ್ಕಾರಕ್ಕೆಬಿಲ್ ಗಳನ್ನು  ಸಲ್ಲಿಸುವಂತೆ ಪತ್ರದಲ್ಲಿ ಎಸ್ಡಿಎಂ ಆಸ್ಪತ್ರೆಗೆ ಸೂಚಿಸಲಾಗಿದೆ.ಮಗುವಿನ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ ಮುಖ್ಯಮಂತ್ರಿಗಳ ಮಾತು ಕೆಲವೇ ಗಂಟೆಗಳಲ್ಲಿ ಅಧಿಕೃತ ಭರವಸೆಯಾಗಿದೆ.ಮುಖ್ಯಮಂತ್ರಿಗಳ ಈ ಸ್ಪಂದನೆಗೆ ಮಗುವಿನ ತಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments