ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ಗರಿಗೆದರಿದ್ದು ಟಿಕೆಟ್ ವಿಚಾರವಾಗಿ ಜೆಡಿಎಸ್ ಹಾಗೂ ಬಿಜೆಪಿ ನಡುವಿನ ಗುದ್ದಾಟ ಬೆನ್ನಲ್ಲೇ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆಯನ್ನು ನೀಡಿದ್ದು, ಅಚ್ಚರಿ ಮೂಡಿಸಿದೆ.
ಹುಬ್ಬಳ್ಳಿಗೆ ತೆರಳಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ಪರಿಷತ್ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆಯನ್ನು ಸಲ್ಲಿಸಿದರು. ಈ ಮೂಲಕ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಅಖಾಡಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸಿಪಿ ಯೋಗೇಶ್ವರ್ ಅವರು ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಚನ್ನಪಟ್ಟಣ ಕ್ಷೇತ್ರವನ್ನು ಸಿಪಿ ಯೋಗೇಶ್ವರ್‌ಗೆ ಬಿಟ್ಟುಕೊಡಲು ಜೆಡಿಎಸ್ ಸಿದ್ದವಿಲ್ಲ. ಹೀಗಾಗಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಳಿಯಲು ನಿರ್ಧಾರ ಮಾಡಿದ್ದಾರೆ.ಇದರ ಬೆನ್ನಲ್ಲೇ ಸಿಪಿ ಯೋಗೇಶ್ವರ್ ನಡೆ ಭಾರೀ ಅಚ್ಚರಿ ಮೂಡಿಸಿದೆ.